
ಪ್ರಜಾವಾಣಿ ವಾರ್ತೆ
ವಿಧಾನಸೌಧ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳಲ್ಲಿ ಒಟ್ಟು 1,777 ಎಕರೆ ಭೂಮಿಯನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಭೂಸ್ವಾಧೀನ ಪ್ರಕ್ರಿಯೆಗಳಿಂದ ಕೈಬಿಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಭೂಸ್ವಾಧೀನ ಮಾಡಲು ಕೆಐಎಡಿಬಿ ಅಧಿಸೂಚನೆ ಹೊರಡಿಸಿತ್ತು. ಅದನ್ನು ವಿರೋಧಿಸಿ ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ಪ್ರತಿಭಟನೆ ನಡೆಸಿತ್ತು. 1339 ದಿನ ನಡೆದ ಹೋರಾಟದ ಬಳಿಕ ಭೂ ಸ್ವಾಧೀನ ಕೈಬಿಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.