ADVERTISEMENT

KIAL ಅಧಿಕಾರಿಗಳ ಕಾರ್ಯಾಚರಣೆ: ₹11 ಕೋಟಿ ಮೌಲ್ಯದ ಗಾಂಜಾ ವಶ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2025, 2:32 IST
Last Updated 16 ಡಿಸೆಂಬರ್ 2025, 2:32 IST
ವಶಕ್ಕೆ ಪಡೆದ ಹೈಡ್ರೋ ಗಾಂಜಾ
ವಶಕ್ಕೆ ಪಡೆದ ಹೈಡ್ರೋ ಗಾಂಜಾ   

ದೇವನಹಳ್ಳಿ: ಕ್ರಿಸ್‌ಮಸ್‌ ಹಾಗೂ ಹೊಸ ವರ್ಷಾಚರಣೆ ವೇಳೆ ಮಾರಾಟಕ್ಕೆ ವಿದೇಶದಿಂದ ಕಳ್ಳಸಾಗಣೆ ಮಾಡುತ್ತಿದ್ದ ₹10.70 ಕೋಟಿ ಮೌಲ್ಯದ 30 ಕೆ.ಜಿಗೂ ಹೆಚ್ಚು ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ಸೋಮವಾರ ವಶಪಡಿಸಿಕೊಂಡಿದ್ದಾರೆ.  

ಮಾದಕ ವಸ್ತು ವಿರೋಧಿ ಆಂದೊಲನ ಅಭಿಯಾನ ಭಾಗವಾಗಿ ವೈಮಾನಿಕ ಗುಪ್ತಚರ ದಳ ಹಾಗೂ ಕಸ್ಟಮ್ಸ್ ಅಧಿಕಾರಿಗಳು ನಡೆಸುತ್ತಿದ್ದ ತಪಾಸಣೆ ವೇಳೆ ಆರೋಪಿಗಳು ಬಲೆಗೆ ಬಿದಿದ್ದಾರೆ. ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕ ಸೇರಿದಂತೆ ಒಟ್ಟು ಐವರನ್ನು ಬಂಧಿಸಲಾಗಿದೆ. 

ಮೊದಲ ಪ್ರಕರಣದಲ್ಲಿ ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕ ಸಾಗಿಸುತ್ತಿದ್ದ ₹2.16 ಕೋಟಿ ಮೌಲ್ಯದ 6.19 ಕೆ.ಜಿ ಹೈಡ್ರೊ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಮೊತ್ತೊಂದು ಪ್ರಕರಣದಲ್ಲಿ ₹70.70 ಲಕ್ಷ ಮೌಲ್ಯದ 2.02 ಕೆ.ಜಿ ತೂಕ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳ ಜಪ್ತಿ ಮಾಡಿದ್ದಾರೆ.

ADVERTISEMENT

ಮೂರನೇ ಪ್ರಕರಣದಲ್ಲಿ ಮೂವರು ಪ್ರಯಾಣಿಕರಿಂದ ಒಟ್ಟು 22.04 ಕೆ.ಜಿ ಹೈದ್ರೊ ಗಾಂಜಾ ಸಿಕಿದ್ದು ಅದರ ಮೌಲ್ಯ ₹7.71 ಕೋಟಿ  ಎಂದು ಅಂದಾಜಿಸಲಾಗಿದೆ. ಎಲ್ಲಾ ಆರೋಪಿಗಳ ಮೇಲೆ ಮಾದಕ ವಸ್ತುಗಳ ನಿಯಂತ್ರಣ ಕಾಯಿದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ
ಬಂಧಿಸಲಾಗಿದೆ.

ಒಂದೇ ದಿನದಲ್ಲಿ ಇಷ್ಟು ಪ್ರಮಾಣದ ಹೈದ್ರೊ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಬ್ಯಾಂಕಾಕ್‌ ಮೂಲದಿಂದಲೇ ಹೆಚ್ಚು ಗಾಂಜಾ ಭಾರತಕ್ಕೆ ಅದರಲ್ಲೂ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಕಳ್ಳ ಸಾಗಣೆಯಾಗುತ್ತಿದೆ. ಈ ಬಗ್ಗೆ  ವೈಮಾನಿಕ ಗುಪ್ತಚರ ದಳ ಹಾಗೂ ಕಸ್ಟಮ್ಸ್ ಅಧಿಕಾರಿಗಳು ಎಚ್ಚರವಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.