ADVERTISEMENT

ಕೋವಿಡ್‌ ಕಾರ್ಯಪಡೆ ಸಭೆ

​ಪ್ರಜಾವಾಣಿ ವಾರ್ತೆ
Published 20 ಮೇ 2021, 3:46 IST
Last Updated 20 ಮೇ 2021, 3:46 IST
ಸಕ್ಕರೆಗೊಲ್ಲಹಳ್ಳಿ ಗ್ರಾಮ ಪಂಚಾಯಿತಿಯಿಂದ ಮಾಸ್ಕ್‌ ಸೇರಿದಂತೆ ವಿವಿಧ ಪರಿಕರಗಳನ್ನು ವಿತರಿಸಲಾಯಿತು
ಸಕ್ಕರೆಗೊಲ್ಲಹಳ್ಳಿ ಗ್ರಾಮ ಪಂಚಾಯಿತಿಯಿಂದ ಮಾಸ್ಕ್‌ ಸೇರಿದಂತೆ ವಿವಿಧ ಪರಿಕರಗಳನ್ನು ವಿತರಿಸಲಾಯಿತು   

ದೊಡ್ಡಬಳ್ಳಾಪುರ: ಕೋವಿಡ್ ಸೋಂಕು ತೀವ್ರವಾಗಿ ವ್ಯಾಪಿಸಿದ್ದ ತಾಲ್ಲೂಕಿನ ಸಕ್ಕರೆಗೊಲ್ಲಹಳ್ಳಿ, ಕೋನೇನಹಳ್ಳಿಯಲ್ಲಿ ಗ್ರಾಮ ಪಂಚಾಯಿತಿ ಟಾಸ್ಕ್ ಪೋರ್ಸ್ ಸಿಬ್ಬಂದಿಯ ಅವಿರತ ಶ್ರಮದಿಂದಾಗಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದು, ಸಕ್ರಿಯ ಪ್ರಕರಣದಲ್ಲಿ ಇಳಿಕೆ, ಗುಣಮುಖರ ಸಂಖ್ಯೆ ಹೆಚ್ಚಾಗಿದೆ.

ಸಕ್ಕರೆಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವಿ.ಸೌಮ್ಯಾ ಮಾತನಾಡಿ, ಕೋವಿಡ್ ಸೋಂಕು ತೀವ್ರವಾಗಿ ವ್ಯಾಪಿಸಿದ್ದ ಕಾರಣ ಸಕ್ಕರೆಗೊಲ್ಲಹಳ್ಳಿ, ಕೋನೇನಹಳ್ಳಿ ಗ್ರಾಮಗಳಲ್ಲಿ ಕಂಟೋನ್ಮೆಂಟ್ ಜೋನ್ ಎಂದು ಘೋಷಿಸಿ ಕೊರೊನಾ ಸೋಂಕು ವ್ಯಾಪಿಸದಂತೆ ಬಹಳಷ್ಟು ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿತ್ತು. ಈಗ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ ಎಂದರು.

ಗ್ರಾಮ ಪಂಚಾಯಿತಿ ಟಾಸ್ಕ್ ಫೋರ್ಸ್ ಸಮಿತಿ, ಗ್ರಾಮ ಟಾಸ್ಕ್ ಫೋರ್ಸ್ ಸಮಿತಿ ರಚಿಸಿ ಕೋವಿಡ್ ತಡೆಗೆ ಕೈಗೊಂಡ ಕ್ರಮಗಳು ಯಶಸ್ವಿಯಾಗುತ್ತಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಬಿ.ಗೋವಿಂದರಾಜು, ಉಪಾಧ್ಯಕ್ಷ ಟಿ.ಎನ್.ನವೀನ್ ಕುಮಾರ್, ವೈದ್ಯಾಧಿಕಾರಿ ಡಾ.ಯೋಗೇಂದ್ರ ಹಾಗೂ ಗ್ರಾಮ ಪಂಚಾಯಿತಿ ಟಾಸ್ಕ್ ಫೋರ್ಸ್ ಸಮಿತಿ, ಗ್ರಾಮ ಟಾಸ್ಕ್ ಫೋರ್ಸ್ ಸಮಿತಿ ಸೋಂಕು ತಡೆಗೆ ಶ್ರಮಿಸುತ್ತಿದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.