
ಪ್ರಜಾವಾಣಿ ವಾರ್ತೆ
ವಿಜಯಪುರ (ದೇವನಹಳ್ಳಿ): ಪಟ್ಟಣದಿಂದ ಚಿತ್ರದುರ್ಗ, ಶೃಂಗೇರಿ, ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳಕ್ಕೆ ನೇರ ಕೆಎಸ್‍ಆರ್‌ಟಿಸಿ ಬಸ್ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ವಿಭಾಗೀಯ ನಿಯಂತ್ರಣಾಧಿಕಾರಿ ಬಸವರಾಜು ಮಾಹಿತಿ ನೀಡಿದ್ದಾರೆ.
ವಿಜಯಪುರದಿಂದ ಬೆಳಗ್ಗೆ 7.45ಕ್ಕೆ ಹೊರಡುವ ಬಸ್ ದೊಡ್ಡಬಳ್ಳಾಪುರ, ದಾಬಾಸ್‍ಪೇಟೆ, ತುಮಕೂರು, ಶಿರಾ ಹಾಗೂ ಹಿರಿಯೂರು ಮಾರ್ಗವಾಗಿ ಚಿತ್ರದುರ್ಗ ತಲುಪಲಿದೆ. ಚಿತ್ರದುರ್ಗದಿಂದ ಮಧ್ಯಾಹ್ನ 2 ಗಂಟೆಗೆ ಹೊರಡುವ ಬಸ್ ಸಂಜೆ 7 ಗಂಟೆಗೆ ವಿಜಯಪುರ ತಲುಪಲಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.