ದೇವನಹಳ್ಳಿ: ನ್ಯಾಯಾಲಯಗಳಲ್ಲಿ ಇರುವ ಪ್ರಕರಣಗಳು ಮತ್ತು ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಮಾರ್ಚ್ 27ರಂದು ಜಿಲ್ಲೆಯಲ್ಲಿ ಮೆಗಾ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆರ್. ನಟೇಶ್ ತಿಳಿಸಿದ್ದಾರೆ.
ಜಿಲ್ಲೆಯ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ಮತ್ತು ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಇಚ್ಛಿಸಿದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವಾ ಸಮಿತಿಗಳಿಗೆ ಆನ್‌ಲೈನ್, ವಿಡಿಯೊ ಕಾನ್ಫರೆನ್ಸ್, ಇ-ಮೇಲ್, ಎಸ್ಎಂಎಸ್, ವಾಟ್ಸ್‌ಆ್ಯಪ್, ಎಲೆಕ್ಟ್ರಾನಿಕ್ ಮೋಡ್ ಅಥವಾ ಖುದ್ದಾಗಿ ಹಾಜರಾಗುವ ಮುಖಾಂತರ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಸಾರ್ವಜನಿಕರು ಅದಾಲತ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ತಮಗೆ ಸಂಬಂಧಪಟ್ಟ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಮುಂದಾಗಬೇಕು ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.