
ಆನೇಕಲ್: ತಾಲ್ಲೂಕಿನ ಬನ್ನೇರುಘಟ್ಟ ಸಮೀಪದ ಗೊಟ್ಟಿಗೆರೆಯಲ್ಲಿ ಕೆರೆ ತಡೆ ಗೋಡೆ ಮತ್ತು ವಾಯುವಿಹಾರ ಪಥ ನಿರ್ಮಾಣ ಕಾಮಗಾರಿಗೆ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ ಭೂಮಿ ಪೂಜೆ ನೆರವೇರಿಸಿದರು.
ಜಲಮೂಲಗಳ ಸಂರಕ್ಷಣೆಗೆ ಪ್ರಥಮ ಆದ್ಯತೆ ನೀಡಬೇಕು. ಇದರಿಂದಾಗಿ ಶುದ್ಧ ಪರಿಸರ ನಮ್ಮದಾಗುತ್ತದೆ. ಬೆಂಗಳೂರು ನಿರ್ಮಾತೃ ಕೆಂಪೇಗೌಡರು ಕೆರೆಗಳನ್ನು ಸಂರಕ್ಷಿಸಿ ಅಭಿವೃದ್ಧಿಪಡಿಸಿದ್ದರು. ಆದರೆ, ಭೂಮಿಯ ಮೇಲಿನ ವ್ಯಾಮೋಹದಿಂದ ಜಲಮೂಲಗಳು ಒತ್ತುವರಿಯಾಗಿವೆ. ಹಾಗಾಗಿ ರಾಜಕಾಲುವೆ, ಕೆರೆ, ಕೆರೆಯ ಸೂಕ್ಷ್ಮ ವಲಯಗಳನ್ನು ಅಭಿವೃದ್ಧಿಪಡಿಸಲು ಹೆಚ್ಚಿನ ಅನುದಾನ ನೀಡಲಾಗುತ್ತಿದೆ ಎಂದು ಶಾಸಕ ಎಂ.ಕೃಷ್ಣಪ್ಪ ತಿಳಿಸಿದರು.
ಆನೇಕಲ್ ತಾಲ್ಲೂಕಿನ ಜಿಗಣಿಯು ಕೈಗಾರಿಕಾ ಪ್ರದೇಶವಾಗಿದೆ. ಜಿಗಣಿ ಕೆರೆ ಅಭಿವೃದ್ಧಿಗೆ ನೆರವು ಕೋರಲಾಗಿದೆ. ಪ್ರತಿ ಕೆರೆಗೂ ಎಸ್‌ಟಿಪಿ ಘಟಕವಿರಬೇಕು. ತ್ಯಾಜ್ಯ ನೀರು ಕೆರೆಗೆ ಹರಿಯದಂತೆ ಸ್ಥಳೀಯ ಸಂಸ್ಥೆಗಳು ಕ್ರಮ ವಹಿಸಬೇಕು ಎಂದರು.
ಮುಂದಿನ ದಿನಗಳಲ್ಲಿ ಕೆರೆಗಳ ಅಭಿವೃದ್ಧಿಗೆ ಪ್ರತ್ಯೇಕ ಕಾರ್ಯಕ್ರಮ ರೂಪಿಸಲಾಗುವುದು. ಕೈಗಾರಿಕಾ ಪ್ರದೇಶದಲ್ಲಿರುವ ಕಂಪನಿಗಳ ನೆರವು ಪಡೆದು ಕೆರೆಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಎಲ್ಲಾ ಕೆರೆಗಳ ಅಭಿವೃದ್ಧಿಗೂ ಕ್ರಿಯಾ ಯೋಜನೆ ರೂಪಿಸಲಾಗುವುದು ಎಂದರು.
ಮುಖಂಡರಾದ ಟಿ.ನಾರಾಯಣ್, ಜಯರಾಮ್ ಅಭಿಷೇಕ್, ಎಇಇ ಉಷಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.