ADVERTISEMENT

ದೊಡ್ಡಬಳ್ಳಾಪುರ: ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2023, 5:58 IST
Last Updated 8 ಮಾರ್ಚ್ 2023, 5:58 IST
ದೊಡ್ಡಬಳ್ಳಾಪುರದ ಅರ್ಕಾವತಿ ಬಡಾವಣೆಯಲ್ಲಿ ಲಕ್ಷ್ಮೀನರಸಿಂಹ ಸ್ವಾಮಿ ರಥೋತ್ಸವ ಸಂಭ್ರಮದಿಂದ ನೆರವೇರಿತು
ದೊಡ್ಡಬಳ್ಳಾಪುರದ ಅರ್ಕಾವತಿ ಬಡಾವಣೆಯಲ್ಲಿ ಲಕ್ಷ್ಮೀನರಸಿಂಹ ಸ್ವಾಮಿ ರಥೋತ್ಸವ ಸಂಭ್ರಮದಿಂದ ನೆರವೇರಿತು   

ದೊಡ್ಡಬಳ್ಳಾಪುರ: ನಗರದ ಅರ್ಕಾವತಿ ಬಡಾವಣೆಯಲ್ಲಿ ಮಂಗಳವಾರ ಶ್ರೀಲಕ್ಷ್ಮೀ ನರಸಿಂಹಸ್ವಾಮಿ ಬ್ರಹ್ಮ ರಥೋತ್ಸವ ಸಂಭ್ರಮದಿಂದ ನೆರವೇರಿತು.

ತಾಲ್ಲೂಕಿನ ವಿವಿಧೆಡೆಯಿಂದ ಆಗಮಿಸಿದ್ದ ಸಹಸ್ರಾರು ಭಕ್ತರು ರಥಕ್ಕೆ ಬಾಳೆಹಣ್ಣು, ದವನ ಸಮರ್ಪಿಸಿ ಸ್ವಾಮಿಯ ದರ್ಶನ ಪಡೆದರು. ರಥೋತ್ಸವದ ಅಂಗವಾಗಿ ತಿರು ಕಲ್ಯಾಣೋತ್ಸವ, ಚತುಸ್ಥ್ಸಾನಾರ್ಚನೆ, ಪೂರ್ಣಾಹುತಿ, ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಿತು. ಮಾರ್ಚ್‌ 8ರಂದು ಪುಷ್ಪಯಾಗ, ದೇವತೋದ್ವಾಸನ ಕಾರ್ಯಕ್ರಮಗಳು ನಡೆಯಲಿವೆ.

ಕದರಿ ಹುಣ್ಣಿಮೆ ಪ್ರಯುಕ್ತ ನಗರದ ಕುಚ್ಚಪ್ಪನಪೇಟೆಯಲ್ಲಿರುವ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ನಡೆದವು. ಬೆಳಿಗ್ಗೆ ಲಕ್ಷ್ಮೀ ನರಸಿಂಹಸ್ವಾಮಿಗೆ ವಿಶೇಷ ಅಲಂಕಾರ, ಆವಲಬೆಟ್ಟ ಲಕ್ಷ್ಮೀ ನರಸಿಂಹಸ್ವಾಮಿಗೆ ಪಂಚಾಮೃತ ಅಭಿಷೇಕ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು. ನಗರದ ವಡ್ಡರಪೇಟೆಯಲ್ಲಿ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ, ವಿಶೇಷ ಪೂಜಾ ಕಾರ್ಯಕ್ರಮ ನಡೆದವು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.