ಆನೇಕಲ್ : ತಾಲ್ಲೂಕಿನ ಬಿದರಗುಪ್ಪೆಯ ಗಾಯತ್ರಿ ನಂಜುಂಡೇಶ್ವರ ಸ್ವಾಮಿ ದೇಗುಲದಲ್ಲಿ ಲೋಕಕಲ್ಯಾಣಾರ್ಥವಾಗಿ ಸಾಮೂಹಿಕ ಲಲಿತಾ ಸಹಸ್ರನಾಮ ಪಾರಾಯಣ ಮತ್ತು ಕುಂಕುಮಾರ್ಚನೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸುತ್ತಮುತ್ತಲ ಗ್ರಾಮಗಳ ನೂರಾರು ಮಂದಿ ಮಹಿಳೆಯರು ಲಲಿತಾ ಸಹಸ್ರನಾಮ ಪಾರಾಯಣದಲ್ಲಿ ಪಾಲ್ಗೊಂಡಿದ್ದರು.
ಧಾರ್ಮಿಕ ಕಾರ್ಯಕ್ರಮದ ಪ್ರಯುಕ್ತ ದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಬೆಳಗಿನಿಂದಲೂ ನೂರಾರು ಮಂದಿ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.