ADVERTISEMENT

ಆಸ್ಪತ್ರೆ ನಿರ್ಮಾಣಕ್ಕೆ ಭೂಮಿಪೂಜೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2020, 5:54 IST
Last Updated 26 ನವೆಂಬರ್ 2020, 5:54 IST
ದೊಡ್ಡಹೆಜ್ಜಾಜಿ ಗ್ರಾಮದಲ್ಲಿ ಸರ್ಕಾರಿ ಆಸ್ಪತ್ರೆಯ ಕಟ್ಟಡ ನಿರ್ಮಾಣಕ್ಕೆ ಶಾಸಕ ಟಿ.ವೆಂಕಟರಮಣಯ್ಯ ಶಂಕುಸ್ಥಾಪನೆ ನೆರವೇರಿಸಿದರು
ದೊಡ್ಡಹೆಜ್ಜಾಜಿ ಗ್ರಾಮದಲ್ಲಿ ಸರ್ಕಾರಿ ಆಸ್ಪತ್ರೆಯ ಕಟ್ಟಡ ನಿರ್ಮಾಣಕ್ಕೆ ಶಾಸಕ ಟಿ.ವೆಂಕಟರಮಣಯ್ಯ ಶಂಕುಸ್ಥಾಪನೆ ನೆರವೇರಿಸಿದರು   

ದೊಡ್ಡಬಳ್ಳಾಪುರ: ತಾಲ್ಲೂಕಿನ ದೊಡ್ಡಹೆಜ್ಜಾಜಿ ಗ್ರಾಮದಲ್ಲಿ ₹ 1.80 ಕೋಟಿ ವೆಚ್ಚದಲ್ಲಿ ನೂತನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಶಾಸಕ ಟಿ. ವೆಂಕಟರಮಣಯ್ಯ ಶಂಕುಸ್ಥಾಪನೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ತಾಲ್ಲೂಕು ಕೇಂದ್ರದಿಂದ 20 ಕಿ.ಮೀ ದೂರದಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ಹೋಗುವುದು ಈ ಭಾಗದ ಜನರಿಗೆ ತೊಂದರೆಯಾಗುತ್ತಿತ್ತು. ದೊಡ್ಡಹೆಜ್ಜಾಜಿಯಲ್ಲಿ ಸುಸಜ್ಜಿತವಾದ ಆಸ್ಪತ್ರೆ ನಿರ್ಮಾಣದಿಂದ ಅನುಕೂಲವಾಗಲಿದೆ ಎಂದರು.

ಜಿಲ್ಲಾ ಪಂ‌ಚಾಯಿತಿ ಅಧ್ಯಕ್ಷ ವಿ. ಪ್ರಸಾದ್, ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್‌, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ರತ್ನಮ್ಮ ಜಯರಾಂ, ಸದಸ್ಯೆ ರತ್ನಮ್ಮ, ಕೆಎಂಎಫ್ ನಿರ್ದೇಶಕ ಬಿ.ಸಿ. ಆನಂದ್‌ಕುಮಾರ್‌, ಮುಖಂಡರಾದ ತಿ. ರಂಗರಾಜು, ರಾಮ
ಕೃಷ್ಣಯ್ಯ, ರವಿಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ವೈದ್ಯಾಧಿ ಕಾರಿ ಡಾ.ಅಮಿತ್
ಹಾಜರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.