ADVERTISEMENT

ದೊಡ್ಡಬಳ್ಳಾಪುರ | ಜಿಲ್ಲಾಧಿಕಾರಿ ಎದುರೇ ವಕೀಲರ ಮೇಲೆ ಹಲ್ಲೆ: ಆರೋಪ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2025, 2:03 IST
Last Updated 8 ಆಗಸ್ಟ್ 2025, 2:03 IST
   

ದೊಡ್ಡಬಳ್ಳಾಪುರ: ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿ ಮಂಗಳವಾರ ಹೊಸಕೋಟೆ ವಕೀಲ ಎಸ್.ಪಿ ಮುನಿರಾಜು ಮೇಲೆ  ಜಿಲ್ಲಾಧಿಕಾರಿ ಸಮ್ಮುಖದಲ್ಲಿಯೇ ಹಲ್ಲೆಗೆ ಯತ್ನಿಸಿ, ಪ್ರಾಣ ಬೆದರಿಕೆ ಒಡ್ಡಿದ ಘಟನೆ ನಡೆದಿದ್ದು ಆರೋಪಿಗಳ ವಿರುದ್ಧ ದೂರು ನೀಡಿದ್ದರೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ ಎಂದು ತಾಲ್ಲೂಕು ವಕೀಲರ ಸಂಘ ಆರೋಪಿಸಿದೆ.

ಗುರುವಾರ ತಾಲ್ಲೂಕು ವಕೀಲರ ಸಂಘದ ಸಭೆಯಲ್ಲಿ ಮಾತನಾಡಿದ ಅಧ್ಯಕ್ಷ ರವಿಮಾವಿನಕುಂಟೆ, ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ, ಪೊಲೀಸರಿಗೆ ಸೂಚಿಸಬೇಕಿತ್ತು. ವಿಶ್ವನಾಥಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದರೂ ಆರೋಪಿಗಳ ಬಂಧಿಸಿಲ್ಲ. ಆರೋಪಿ ಬಂಧಿಸಿ ಕಾನೂನು ಕ್ರಮ ಕೈಗೊಳ್ಳದಿದ್ದರೆ ಕೋರ್ಟ್ ಕಲಾಪ ಬಹಿಷ್ಕರಿಸಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಅಖಿಲ ಭಾರತ ವಕೀಲರ ಒಕ್ಕೂಟದ ಸಂಚಾಲಕ ಎಸ್.ರುದ್ರಾರಾಧ್ಯ, ರೇಣುಕಾರಾಧ್ಯ, ತಾಲ್ಲೂಕು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎ.ಕೃಷ್ಣಮೂರ್ತಿ, ಖಜಾಂಚಿ ಮುನಿರಾಜು ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.