ADVERTISEMENT

ಕಾನೂನು ಅರಿವು: ಸ್ತ್ರೀಯರಿಗೆ ಸಲಹೆ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2023, 5:04 IST
Last Updated 15 ಮಾರ್ಚ್ 2023, 5:04 IST
ದೊಡ್ಡಬಳ್ಳಾಪುರದ ಮುತ್ಯಾಲಮ್ಮ ಕಲಾ ಸಂಘದಿಂದ ನಡೆದ ವಿಶ್ವ ಮಹಿಳಾ ದಿನಾಚರಣೆಯಲ್ಲಿ ವಿವಿಧ ಕ್ಷೇತ್ರದ ಸಾಧಕಿಯರನ್ನು ಸನ್ಮಾನಿಸಲಾಯಿತು
ದೊಡ್ಡಬಳ್ಳಾಪುರದ ಮುತ್ಯಾಲಮ್ಮ ಕಲಾ ಸಂಘದಿಂದ ನಡೆದ ವಿಶ್ವ ಮಹಿಳಾ ದಿನಾಚರಣೆಯಲ್ಲಿ ವಿವಿಧ ಕ್ಷೇತ್ರದ ಸಾಧಕಿಯರನ್ನು ಸನ್ಮಾನಿಸಲಾಯಿತು   

ದೊಡ್ಡಬಳ್ಳಾಪುರ: ಶ್ರೀಮುತ್ಯಾಲಮ್ಮ ಕಲಾ ಸಂಘದಿಂದ ವಿಶ್ವ ಮಹಿಳಾ ದಿನಾಚರಣೆ ಹಾಗೂ ವಿವಿಧ ಕ್ಷೇತ್ರದ ಸಾಧಕಿಯರಿಗೆ ಸನ್ಮಾನ ಸಮಾರಂಭವು ನಗರದ ಕನ್ನಡ ಜಾಗೃತ ಭವನದಲ್ಲಿ ನಡೆಯಿತು.

ಶಾಸಕ ಟಿ. ವೆಂಕಟರಮಣಯ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಹಕ್ಕುಗಳನ್ನು ಅರಿಯುವ ಮೂಲಕ ತಮಗಾಗುವ ಶೋಷಣೆ ವಿರುದ್ಧ ಧ್ವನಿ ಎತ್ತಬೇಕು. ಆಗ ಮಾತ್ರ ಮಹಿಳಾ ದಿನಾಚರಣೆ ಅರ್ಥಪೂರ್ಣವಾಗುತ್ತದೆ ಎಂದರು.

ನಗರ ಠಾಣೆಯ ಪಿಎಸ್‍ಐ ಅನಿತಾ ಮಾತನಾಡಿ, ಎಲ್ಲಾ ಕ್ಷೇತ್ರದಲ್ಲಿ ಮಹಿಳೆಯರು ಸಾಧಿಸುತ್ತಿರುವುದು ಸಂತಸದ ಸಂಗತಿ. ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ, ಶೋಷಣೆ ತಡೆಯಲು ಕಾನೂನುಗಳು ಪ್ರಬಲವಾಗಿವೆ. ಈ ಬಗ್ಗೆ ಎಲ್ಲರೂ ಅರಿವು ಹೊಂದಬೇಕು ಎಂದು ಸಲಹೆ ನೀಡಿದರು.

ADVERTISEMENT

ವರಲಕ್ಷ್ಮಿ ವೆಂಕಟರಮಣಯ್ಯ ಅಧ್ಯಕ್ಷತೆವಹಿಸಿದ್ದರು. ವಿವಿಧ ಕ್ಷೇತ್ರದ ಸಾಧಕಿಯರಿಗೆ ನಾರಿ ಶಕ್ತಿ ಪುರಸ್ಕಾರ ನೀಡಲಾಯಿತು. ಶ್ರೀಮುತ್ಯಾಲಮ್ಮ ಕಲಾ ಸಂಘದ ಅಧ್ಯಕ್ಷೆ ಎ.ಎಲ್. ರಾಧಾ, ಕಾರ್ಯದರ್ಶಿ ಕೆ. ನಾಗರತ್ನಮ್ಮ, ಕೆಪಿಸಿಸಿ ಮಾಧ್ಯಮ ಕಾರ್ಯದರ್ಶಿ ಜಿ. ಲಕ್ಷ್ಮೀಪತಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಎಚ್‌.ಎಸ್‌. ರೇವತಿ ಅನಂತರಾಮ್, ಕೆ.ಎಂ. ಕೃಷ್ಣಮೂರ್ತಿ, ಲೇಖಕಿ ಕೆ.ಎಸ್. ಪ್ರಭಾ, ಕನ್ನಡ ಸಾಹಿತ್ಯ ಪರಿಷತ್‌ ತಾಲ್ಲೂಕು ಘಟಕದ ಅಧ್ಯಕ್ಷ ಪಿ. ಗೋವಿಂದರಾಜ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.