ದೇವನಹಳ್ಳಿ: ಕೊಯಿರಾ ಬೆಟ್ಟದ ಸಮೀಪದ ಕೆರೆ ಅಂಗಳ ರಾಮನಾಥಪುರ ಗ್ರಾಮದ ದಿನ್ನೆಯಲ್ಲಿ ಭಾನುವಾರ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಕಾರ್ಯಾಚರಣೆಯಲ್ಲಿ ಬೋನಿಗೆ ಚಿರತೆಯೊಂದು ಸೆರೆ ಸಿಕ್ಕಿದೆ.
ಕೊಯಿರಾ, ಅರುವನಹಳ್ಳಿ ಬೆಟ್ಟ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿದ್ದು ರೈತರು ಅರಣ್ಯ ಇಲಾಖೆಗೆ ಸಾಕಷ್ಟು ಸಲ ದೂರು ನೀಡಿದ್ದರು. ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆ ಹಿಡಿಯಲು ಬೋನು ಇರಿಸಿದ್ದರು.
ಸೆರೆ ಸಿಕ್ಕ ಚಿರತೆ ನೋಡಲು ಸುತ್ತಮುತ್ತಲಿನ ನೂರಾರು ಜನರು ಜಮಾವಣೆಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.