ADVERTISEMENT

ಬೋನಿಗೆ ಬಿದ್ದ ಹೆಣ್ಣು ಚಿರತೆ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2024, 16:44 IST
Last Updated 18 ಏಪ್ರಿಲ್ 2024, 16:44 IST
ದೊಡ್ಡಬಳ್ಳಾಪುರ ತಾಲ್ಲೂಕಿನ ಸೂಲುಕುಂಟೆ ಸಮೀಪ ಬೋನಿಗೆ ಬಿದ್ದಿರುವ ಹೆಣ್ಣು ಚಿರತೆ
ದೊಡ್ಡಬಳ್ಳಾಪುರ ತಾಲ್ಲೂಕಿನ ಸೂಲುಕುಂಟೆ ಸಮೀಪ ಬೋನಿಗೆ ಬಿದ್ದಿರುವ ಹೆಣ್ಣು ಚಿರತೆ   

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು ಹೋಬಳಿಯ ಸೂಲುಕುಂಟೆ ಗ್ರಾಮಸ್ಥರ ನಿದ್ದೆ ಕೆಡಿಸಿದ್ದ ಎರಡು ವರ್ಷದ ಹೆಣ್ಣು ಚಿರತೆ ಬುಧವಾರ ರಾತ್ರಿ ಬೋನಿಗೆ ಬಿದ್ದಿದೆ.

ಸಾಕು ಪ್ರಾಣಿಗಳ ರಕ್ಷಣೆಗೆ ಗ್ರಾಮಸ್ಥರು ಎರಡು ದಿನಗಳ ಹಿಂದೆ ತಂದಿಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ. ಚಿರತೆಯನ್ನು ಗ್ರಾಮಸ್ಥರು ಅರಣ್ಯ ಇಲಾಖೆಗೆ ವಹಿಸಿದ್ದಾರೆ.

ಕೆಲವು ದಿನಗಳಿಂದ ಮನೆ ಬಳಿಯ ಸಾಕು ಪ್ರಾಣಿಗಳನ್ನು ಹೊತ್ತೊಯ್ಯುತ್ತಿದ್ದ ಚಿರತೆ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು. ಫೆಬ್ರುವರಿಯಲ್ಲಿ ಇದೇ ಗ್ರಾಮದ ಸಮೀಪ ಚಿರತೆಯೊಂದು ಬೋನಿಗೆ ಬಿದ್ದಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.