ADVERTISEMENT

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ 202 ಕುಷ್ಠ ರೋಗ ಸಕ್ರಿಯ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2025, 2:08 IST
Last Updated 23 ಆಗಸ್ಟ್ 2025, 2:08 IST
<div class="paragraphs"><p>ಜಿಲ್ಲಾಡಳಿತ ಭವನದಲ್ಲಿ ನಡೆದ ಕುಷ್ಠರೋಗ ಪ್ರಕರಣ ಸಮೀಕ್ಷೆ ಹಾಗೂ ಸರ್ಕಾರದ ಸೌಲಭ್ಯ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ಭಾಗವಹಿಸಿದ್ದರು</p></div>

ಜಿಲ್ಲಾಡಳಿತ ಭವನದಲ್ಲಿ ನಡೆದ ಕುಷ್ಠರೋಗ ಪ್ರಕರಣ ಸಮೀಕ್ಷೆ ಹಾಗೂ ಸರ್ಕಾರದ ಸೌಲಭ್ಯ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ಭಾಗವಹಿಸಿದ್ದರು

   

ದೇವನಹಳ್ಳಿ: ಕುಷ್ಠರೋಗ ಹೊಂದಿರುವ ಮತ್ತು ಕುಷ್ಠರೋಗದಿಂದ ಅಂಗವಿಕಲತೆಗೆ ಬಾಧಿತರಾದ ಐವರು ಮಕ್ಕಳು ಸೇರಿದಂತೆ ಒಟ್ಟು 202 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಈ ರೋಗದಿಂದ ಬಳಲುವವರಿಗೆ ಇಲಾಖೆಯಿಂದ ದೃಢೀಕರಣ ಪತ್ರ ನೀಡಿ ಸರ್ಕಾರದಿಂದ ಸಿಗುವ ಎಲ್ಲಾ ಯೋಜನೆಗಳನ್ನು ಅವರಿಗೆ ಪೂರೈಸುವಂತೆ ಮಾಡಬೇಕು ಎಂದು ಕೇಂದ್ರ ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಡಾ.ಪ್ರದೀಪ್ತಾ ಕುಮಾರ ನಾಯಕ್ ಹೇಳಿದರು.

ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ನಡೆದ ಕುಷ್ಠರೋಗ ಪ್ರಕರಣಗಳ ಸಮೀಕ್ಷೆ ಹಾಗೂ ಸರ್ಕಾರದ ಸೌಲಭ್ಯ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ADVERTISEMENT

ಸಂಬಂಧಪಟ್ಟ ಇಲಾಖೆಗಳು ಸರ್ಕಾರದಿಂದ ಸಿಗುವ ಆರೋಗ್ಯ ಸೇವೆ, ಪಿಂಚಣಿ ಸೌಲಭ್ಯ, ಮನೆ ಸೌಲಭ್ಯ, ರೇಷನ್, ಶಿಕ್ಷಣ ಹಾಗೂ ಇತರೆ ಸವಲತ್ತುಗಳು ಎಲ್ಲಾ ಸಂತ್ರಸ್ತರಿಗೆ ಸಿಗಬೇಕು. ಸಮಾಜದ ಮುನ್ನೆಲೆಗೆ ಅವರನ್ನು ತಂದು ಸಮಾನತೆಯಿಂದ ಕಾಣುವುದು ಮಾನವವೀಯತೆ ಗುಣ. ಆ ನಿಟ್ಟಿನಲ್ಲಿ ಅಧಿಕಾರಿಗಳು ಗಮನ ಹರಿಸಿ ಎಂದು

ನಿರ್ದೇಶಿಸಿದರು.

ಮನುಷ್ಯನ ಆರೋಗ್ಯಕ್ಕೆ ಕುಷ್ಠರೋಗವು ಒಂದು ಬಾಧಿತ ರೋಗವಾಗಿದ್ದು, ಕುಷ್ಠರೋಗ ಮುಕ್ತ ಸಮಾಜ ನಿರ್ಮಿಸಲು ಅಧಿಕಾರಿಗಳು ನಿರಂತರ ಕಾರ್ಯ ಪ್ರವೃತ್ತರಾಗಿರಬೇಕ. ರೋಗದ ಆರಂಭಿಕ ಲಕ್ಷಣ ಪತ್ತೆಯಿಂದ ಕುಷ್ಠರೋಗ ನಿಯಂತ್ರಿಸಬಹುದು. ರೋಗದ ಲಕ್ಷಣಗಳು ಕಂಡುಬಂದ ತಕ್ಷಣವೇ ಅದನ್ನು ಪತ್ತೆ ಹಚ್ಚಿ, ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದರ ಜೊತೆಗೆ, ಪ್ರಾಥಮಿಕ ಹಂತದಲ್ಲಿಯೇ ಚಿಕಿತ್ಸೆ ಮತ್ತು ವೈದ್ಯಕೀಯ ಕ್ರಮ ಕೈಗೊಳ್ಳುವುದರಿಂದ ಹರಡುವಿಕೆ ತಡೆಯಬಹುದು ಎಂದು

ತಿಳಿಸಿದರು.

ಆರೋಗ್ಯ ಇಲಾಖೆ ಜೊತೆಗೆ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ವಯಂ ಸೇವಾ ಸಂಸ್ಥೆಗಳು ಸಾರ್ವಜನಿಕರಿಗೆ ಅರಿವು ಮೂಡಿಸಿ. ಎಲ್ಲಾ ಇಲಾಖೆಗಳ ಸಹಕಾರ ಮತ್ತು ಸಮನ್ವಯತೆ ಇಂದ ಕುಷ್ಠರೋಗ ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ ಎಂದರು.

ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಸಿಇಒ ಕೆ.ಎನ್.ಅನುರಾಧ, ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನ ಅಧಿಕಾರಿ ಡಾ.ಉಮಾ ಎಂ, ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಾ ಕೃಷ್ಣ ರೆಡ್ಡಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ನಾಗರಾಜ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.