
ರಾಮಚಂದ್ರಯ್ಯ , ಗೀತಾಮಣಿ
ದಾಬಸ್ ಪೇಟೆ: ನೆಲಮಂಗಲ ತಾಲ್ಲೂಕು, ಕಳಲುಘಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೀತಾಮಣಿ ಅವರನ್ನು ಅಮಾನತು ಮಾಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ಎಸ್.ಅನುರಾಧ ಅವರು ಆದೇಶ ಹೊರಡಿಸಿದ್ದಾರೆ.
ಇದೇ ಪಂಚಾಯಿತಿಯ ಗ್ರಂಥಾಲಯದ ಗ್ರಂಥಪಾಲಕರಾಗಿ (ಮೇಲ್ವಿಚಾರಕ) 25 ವರ್ಷದಿಂದ ಕೆಲಸ ಮಾಡುತ್ತಿದ್ದ
ಗೋವೆನಹಳ್ಳಿ ಗ್ರಾಮದ ರಾಮಚಂದ್ರಯ್ಯ ಅವರು ಅ.27 ರಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ರಾಮಚಂದ್ರಯ್ಯ ಅವರ ಸಾವಿಗೆ ಪಿಡಿಒ ಗೀತಾಮಣಿ ಕಾರಣ. ಸುಮಾರು ಮೂರು ತಿಂಗಳಿಂದ ವೇತನ ಪಾವತಿಸದೇ ಹಾಗೂ ಅವರು ಹಾಜರಾತಿ ತೋರಿಸಲು ಬಯೋ ಮೆಟ್ರಿಕ್ ಕೊಡದೆ ಕಿರುಕುಳ ನೀಡಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಅವರ ಸಹೋದರನ ಮಗ ಕಾಂತರಾಜು ಠಾಣೆಗೆ ದೂರು ನೀಡಿದ್ದರು.
ಈ ಸಂಬಂಧ ಪಿಡಿಒ ಗೀತಾಮಣಿ(ಆರೋಪಿ–1) ವಿರುದ್ಧ ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಪಂಚಾಯಿತಿ ಸಿಬ್ಬಂದಿ ಮೃತಪಟ್ಟು 24 ಗಂಟೆ ಕಳೆದರೂ ಪಿಡಿಒ ಸಂಪರ್ಕಕ್ಕೆ ಸಿಕ್ಕಿಲ್ಲ. ಈ ಬಗ್ಗೆ ಮೇಲಾಧಿಕಾರಿಗಳಿಗೆ ಮಾಹಿತಿ ತಿಳಿಸದೆ ತೆರಳಿ ಲೋಪ ಎಸಗಿದ್ಧಾರೆ. ಅಲ್ಲದೇ ರಾಮಚಂದ್ರಯ್ಯ ಅವರಿಗೆ ವೇತನ ಪಾವತಿಸದೇ ಇರುವುದು ಕಂಡುಬಂದಿದೆ ಎಂದು ಅಮಾನತು ಆದೇಶದಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.