ADVERTISEMENT

ಶೀಲ ಶಂಕಿಸಿ ಪತ್ನಿ ಕೊಂದವನಿಗೆ ಜೀವಾವಧಿ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2023, 15:28 IST
Last Updated 5 ಆಗಸ್ಟ್ 2023, 15:28 IST
   

ಆನೇಕಲ್ : ಶೀಲ ಶಂಕಿಸಿ ಪತ್ನಿಯ ಕೊಲೆ ಮಾಡಿದ್ದ ಅಪರಾಧಿಗೆ ಆನೇಕಲ್‌ನ ಮೂರನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕರಬಾರಿ ರವೀಂದ್ರ ಅವರು ಜೀವಾವಧಿ ಶಿಕ್ಷೆ ಮತ್ತು ₹ 50 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ ಎಂದು ಸರ್ಕಾರಿ ಅಭಿಯೋಜಕ ಜಿ.ತಾರಾನಾಥ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆನೇಕಲ್‌ ತಾಲ್ಲೂಕಿನ ಕಾಚನಾಯಕನಹಳ್ಳಿ ದಿಣ್ಣೆ ನಿವಾಸಿ ವೆಂಕಟೇಶ್‌ ಶಿಕ್ಷೆಗೆ ಒಳಗಾದ ಅಪರಾಧಿ. 

ವೆಂಕಟೇಶ್‌ ತನ್ನ ಪತ್ನಿ ಮಾಲಾರಾಣಿ ಅವರ ಶೀಲ ಶಂಕಿಸಿ 2021ರ ನವೆಂಬರ್‌ 28ರಂದು ಕೊಲೆ ಮಾಡಿದ್ದ. ಸೂರ್ಯಸಿಟಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ADVERTISEMENT

ವಿಚಾರಣೆ ನಡೆಸಿದ ನ್ಯಾಯಾಧೀಶರು ಆಗಸ್ಟ್‌ 3ರಂದು ಆರೋಪಿ ವೆಂಕಟೇಶ್‌ಗೆ ಜೀವಾವಧಿ ಶಿಕ್ಷೆ ಮತ್ತು ₹50 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಜಿ.ತಾರಾನಾಥ ಅವರು ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.