ಕರ್ನಾಟಕ ಲೋಕಾಯುಕ್ತ
– ಪ್ರಜಾವಾಣಿ ಚಿತ್ರ
ದೇವನಹಳ್ಳಿ: ರಾಜ್ಯ ಲೋಕಾಯುಕ್ತ ಸಂಸ್ಥೆಯಿಂದ ಜಿಲ್ಲೆಯ ಬಾಕಿ ಇರುವ ದೂರುಗಳ ವಿಚಾರಣೆ ಹಾಗೂ ಪ್ರಕರಣ ವಿಲೇವಾರಿ ಸಭೆಯನ್ನು ಸೆ.12ರ ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅಧ್ಯಕ್ಷತೆ ವಹಿಸಲಿದ್ದಾರೆ.
ಜಿ.ಪಂ. ಸಿಇಒ ಡಾ.ಕೆ.ಎನ್ ಅನುರಾಧ, ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಕೆ. ಬಾಬ, ಕರ್ನಾಟಕ ಲೋಕಾಯುಕ್ತ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ. ವಂಶಿಕೃಷ್ಣ , ಕರ್ನಾಟಕ ಲೋಕಾಯುಕ್ತ ವಿಚಾರಣೆಗಳು-1 ಉಪ ನಿಬಂಧಕ ಅರವಿಂದ ಎನ್.ವಿ, ಹಿರಿಯ ಶ್ರೇಣಿ ದಿವಾಣಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಶೈಲ್ ಭೀಮಸೇನ ಬಗಾಡಿ ಉಪಸ್ಥಿತರಿರುತ್ತಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.