ಕರ್ನಾಟಕ ಲೋಕಾಯುಕ್ತ
– ಪ್ರಜಾವಾಣಿ ಚಿತ್ರ
ದೇವನಹಳ್ಳಿ: ಪೋಕ್ಸೊ ಪ್ರಕರಣದ ದೋಷಾರೋಪ ಪಟ್ಟಿ ಸಲ್ಲಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ದೇವನಹಳ್ಳಿ ಪೊಲೀಸ್ ಠಾಣೆ ಮಹಿಳಾ ಪಿಎಸ್ಐ ಜಗದೇವಿ ಮತ್ತು ಪೇದೆ ಅಂಬರೀಶ್ ಬುಧವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.
ಪೋಕ್ಸೊ ಪ್ರಕರಣದ ಜಾರ್ಜ್ ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲು ₹75 ಸಾವಿರ ಲಂಚ ನೀಡುವಂತೆ ದೇವನಹಳ್ಳಿ ಪಟ್ಟಣ ಪೊಲೀಸ್ ಠಾಣೆ ಪಿಎಸ್ಐ ಜಗದೇವಿ ಮತ್ತು ಕಾನ್‌ಸ್ಟೆಬಲ್ ಮಂಜುನಾಥ್ ಸಂತ್ರಸ್ತರ ಬೇಡಿಕೆ ಇಟ್ಟಿದ್ದರು.
ಈ ಪ್ರಕಾರ, ಕಾನ್‌ಸ್ಟೆಬಲ್ ಅಂಬರೀಶ್ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಪಿಎಸ್‌ಐ ಜಗದೇವಿ ಮತ್ತು ಕಾನ್‌ಸ್ಟೆಬರ್ ಮಂಜುನಾಥ್ ನಾಪತ್ತೆಯಾಗಿದ್ದು, ಅವರ ಶೋಧಕ್ಕೆ ಕಾರ್ಯಾಚರಣೆ ಕೈಗೊಂಡಿದ್ದಾರೆ.
ಲೋಕಾಯುಕ್ತ ಪೊಲೀಸ್ ಜಿಲ್ಲಾ ಎಸ್‌ಪಿ ವಂಶಿಕೃಷ್ಣ, ಡಿವೈಎಸ್‌ಪಿ ನಾಗೇಶ್ ಹಸ್ಲರ್ ಹಾಗೂ ಇನ್‌ಸ್ಪೆಕ್ಟರ್ ಅನಿಲ್ ಈ ಕಾರ್ಯಾಚರಣೆಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.