ADVERTISEMENT

ಬೆಂಗಳೂರು ಗ್ರಾಮಾಂತರ | ಚರ್ಮಗಂಟು ರೋಗಕ್ಕೆ 154 ರಾಸು ಸಾವು

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2022, 6:37 IST
Last Updated 3 ಡಿಸೆಂಬರ್ 2022, 6:37 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈವರೆಗೂ 2,037 ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು, 154 ರಾಸುಗಳು ಮೃತಪಟ್ಟಿವೆ.

ಜಿಲ್ಲೆಯಲ್ಲಿ ಪ್ರಸ್ತುತ 1,62,980 ಜಾರುವಾರುಗಳಿವೆ. ಮುಂಜಾಗ್ರತಾ ಕ್ರಮವಾಗಿ ಈಗಾಗಲೇ 1,51,526 ಜಾನುವಾರುಗಳಿಗೆ ಲಸಿಕೆ ನೀಡಲಾಗಿದೆ. ರೋಗ ಪೀಡಿತ ಜಾನುವಾರುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಕ್ರಮವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್‌.ಲತಾ ತಿಳಿಸಿದ್ದಾರೆ.

ಜಾನುವಾರು ಸಂತೆ, ಜಾತ್ರೆ ನಿಷೇಧ:

ADVERTISEMENT

ಜಿಲ್ಲೆಯ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜನವರಿ 30 ರವರೆಗೆ ಜಿಲ್ಲೆಯಾದ್ಯಂತ ಜಾನುವಾರು ಜಾತ್ರೆ, ಸಂತೆ ಮತ್ತು ಸಾಗಾಣಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಹಲವೆಡೆ ಜಾನುವಾರು ಸಂತೆ, ಜಾತ್ರೆ ನಡೆಯುವುದರಿಂದ ರೋಗ ಹರಡಲಿದೆ. ರೋಗ ಹರಡುವುದನ್ನು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.