ಹೊಸಕೋಟೆ: ರಾಜ್ಯದಲ್ಲಿ ಮೊದಲ ಬಾರಿಗೆ ತಾಲ್ಲೂಕಿನಲ್ಲಿ 30 ಮ್ಯಾಗ್ನೆಟ್ ಶಾಲೆಗಳ ಮೂಲಕ ತಾಲ್ಲೂಕಿನ ಎಲ್‌ಕೆಜಿಯಿಂದ ಪಿಯುಸಿ ವರೆಗೂ ಸಾಮಾನ್ಯನಿಗೂ ಗುಣಮಟ್ಟದ ಶಿಕ್ಷಣ ನೀಡುವ ಪ್ರಯೋಗಕ್ಕೆ ಇದೇ ಅಕ್ಟೋಬರ್ 2ರಂದು ಗಾಂಧಿ ಜಯಂತಿ ಪ್ರಯುಕ್ತ ವಿಧ್ಯುಕ್ತ ಚಾಲನೆ ನೀಡಲಾಗುತ್ತಿದೆ ಎಂದು ಶಾಸಕ ಶರತ್ ತಿಳಿಸಿದರು.
ಜಿಲ್ಲಾ ಪಂಚಾಯಿತಿ, ಹೊಸಕೋಟೆಯ ತಾಲ್ಲೂಕು ಆಡಳಿತ ಮತ್ತು ತಾಲ್ಲೂಕು ಪಂಚಾಯಿತಿ ಸಹಯೋಗದಲ್ಲಿ 138ನೇ ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನದ ಪ್ರಯುಕ್ತ ನಗರದದಲ್ಲಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚಾರಣೆ ಉದ್ಘಾಟಿಸಿ ಮಾತನಾಡಿದರು.
ಇನ್ಫೋಸಿಸ್ ಸಂಸ್ಥೆ ಸಹಯೋಗದಲ್ಲಿ ₹90 ಕೋಟಿ ವೆಚ್ಚದಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.
ಸಾವಿತ್ರಿ ಬಾಯಿಫುಲೆ ಇಂದಿನ ಎಲ್ಲಾ ಹೆಣ್ಣುಮಕ್ಕಳಿಗೆ ಮಾದರಿಯಾಗಬೇಕಿದೆ. ಅವರ ಮಾರ್ಗದಲ್ಲಿ ಎಲ್ಲರು ಸಾಗಬೇಕು ಎಂದರು.
ಹೊಸಕೋಟೆ ತಾಲ್ಲೂಕಿನಲ್ಲಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಮುನಿರಾಜ, ವೀಣಾ, ವೆಂಕಟೇಶ್, ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ತಾಲ್ಲೂಕಿನಲ್ಲಿ ವಯೋನಿವೃತ್ತಿ ಹೊಂದಿದ ಶಿಕ್ಷಕರು ಮತ್ತು ವಿವಿಧ ಸ್ಪರ್ಧೆಗಳಲ್ಲಿ ವಿಜೇತ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಸಮರ್ಥನಮ್ ಸಂಸ್ಥೆಯ ವಿಶೇಷ ಚೇತನ ಸಂಪನ್ಮೂಲ ವ್ಯಕ್ತಿ ಮಹಾಂತೇಶ್, ಜಿ.ಕೆ.ಮಹಾಂತೇಶ್, ಎಸ್.ಕೆ.ಪದ್ಮನಾಬ್, ಕ್ಷೇತ್ರಶಿಕ್ಷಣಾಧಿಕಾರಿ ಕೃಷ್ಣಮೂರ್ತಿ, ಕೆ.ಎನ್. ಮಂಜುನಾಥ್, ಬಾಬುರೆಡ್ಡಿ, ಬಿ.ವಿ.ಸತೀಶ್ ಗೌಡ, ಮುನಿಯಪ್ಪ, ಮಲ್ಲೇಶ್, ಮಂಜುನಾಥ್, ಕೊರಳೂರು ಸುರೇಶ, ದೇವರಾಜ್, ಸೋಣ್ಣಪ್ಪ ಮುನಿಗಂಗಯ್ಯ ಇದ್ದರು.
ಜಿಲ್ಲಾ ಮಟ್ಟದ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಸನ್ಮಾನಿಸಲಾಯಿತು
ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಸಿಎಂ ಭೇಟಿ: ಟಿಇಟಿ ಪರೀಕ್ಷೆಯನ್ನು ಎಲ್ಲಾ ಶಿಕ್ಷಕರು ಕಡ್ಡಾಯವಾಗಿ ಎರಡು ವರ್ಷದೊಳಗೆ ಪೂರ್ಣಗೊಳಿಸಬೇಕೆಂಬ ಸುಪ್ರೀಂಕೋರ್ಟ್ ಆದೇಶದಿಂದ ಆಗುವ ಶಿಕ್ಷಕರಿಗೆ ಆಗುವ ಕಾನೂನು ತೊಡುಕು ಸರಿಪಡಿಸುವ ಕುರಿತು ಮುಖ್ಯಮಂತ್ರಿ ಮತ್ತು ಡಿಸಿಎಂ ಅವರಲ್ಲಿ ಚರ್ಚಿಸಲಾಗಿದ್ದು ಆದಷ್ಟು ಬೇಗೆ ಇದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ವಿಧಾನ ಪರಿಷತ್ ಸದಸ್ಯೆ ಪುಟ್ಟಣ್ಣ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.