ADVERTISEMENT

ಮಾಕನಹಳ್ಳಿ ಸೀಲ್ ಡೌನ್

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2021, 4:43 IST
Last Updated 19 ಏಪ್ರಿಲ್ 2021, 4:43 IST
ಕೊರೊನಾ ಸೋಂಕಿನ ಎರಡನೇ ಅಲೆಯಲ್ಲಿ 24ಕ್ಕೂ ಹೆಚ್ಚು ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ಹೊಸಕೋಟೆ ತಾಲ್ಲೂಕಿನ ಮಾಕನಹಳ್ಳಿ ಗ್ರಾಮವನ್ನು ಸೀಲ್‌ಡೌನ್ ಮಾಡಲಾಗಿದೆ
ಕೊರೊನಾ ಸೋಂಕಿನ ಎರಡನೇ ಅಲೆಯಲ್ಲಿ 24ಕ್ಕೂ ಹೆಚ್ಚು ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ಹೊಸಕೋಟೆ ತಾಲ್ಲೂಕಿನ ಮಾಕನಹಳ್ಳಿ ಗ್ರಾಮವನ್ನು ಸೀಲ್‌ಡೌನ್ ಮಾಡಲಾಗಿದೆ   

ಹೊಸಕೋಟೆ: ತಾಲ್ಲೂಕಿನ ಜಡಗೇನಹಳ್ಳಿ ಹೋಬಳಿಯ ಮಾಕನಹಳ್ಳಿ ಗ್ರಾಮದಲ್ಲಿ 24ಕ್ಕೂ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ಗ್ರಾಮವನ್ನು ಸೀಲ್‌ ಡೌನ್‌ ಮಾಡಲಾಗಿದೆ.

ಶಾಸಕ ಶರತ್ ಬಚ್ಚೇಗೌಡ ಹಿರಿಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ ಗ್ರಾಮವನ್ನು ಸೀಲ್ ಡೌನ್ ಮಾಡಲು ನೀಡಿದ ಸೂಚಿಸಿದರು. ಗ್ರಾಮವನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗಿದ್ದು ತಾಲ್ಲೂಕಿನ ಜನತೆ ಕೊರೊನಾ ಸೋಂಕಿನ ಎರಡನೇ ಅಲೆಯಿಂದ ರಕ್ಷಿಸಿಕೊಳ್ಳಲು ಸಾಧ್ಯವಾದಷ್ಟು ಮನೆಯಲ್ಲಿ ಇರಬೇಕು ಎಂದು ಶಾಸಕರು ತಾಲ್ಲೂಕಿನ ಜನತೆಯಲ್ಲಿ ಮನವಿ ಮಾಡಿದ್ದಾರೆ. ಅನಿವಾರ್ಯವಾಗಿ ಹೊರಗೆ ಓಡಾಡುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಿ ಅಂತರವನ್ನು ಕಾಪಾಡುವಂತೆ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT