ADVERTISEMENT

ದೊಡ್ಡಬಳ್ಳಾಪುರ: ಸಂಭ್ರಮದ ಸಂಕ್ರಾಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 15 ಜನವರಿ 2024, 15:40 IST
Last Updated 15 ಜನವರಿ 2024, 15:40 IST
ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡತುಮಕೂರು ಗ್ರಾಮದಲ್ಲಿ ಕಾಟಿಮರಾಯನಿಗೆ ಪೂಜೆಸಲ್ಲಿಸಲಾಯಿತು
ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡತುಮಕೂರು ಗ್ರಾಮದಲ್ಲಿ ಕಾಟಿಮರಾಯನಿಗೆ ಪೂಜೆಸಲ್ಲಿಸಲಾಯಿತು   

ದೊಡ್ಡಬಳ್ಳಾಪುರ: ಸುಗ್ಗಿ ಹಬ್ಬ ಸಂಕ್ರಾಂತಿಯನ್ನು ಸಡಗರದಿಂದ ಆಚರಿಸಲಾಯಿತು. ಎಳ್ಳು–ಬೆಲ್ಲ ವಿನಿಮಯ ಮಾಡಿಕೊಳ್ಳುವ ಮೂಲಕ ಸಂಕ್ರಾಂತಿ ಶುಭಾಶಯ ಕೋರಿದರು.

ಮನೆಗಳ ಮುಂದೆ ಸಂಕ್ರಾಂತಿ ವಿಶೇಷ ಶುಭಾಶಯ ಕೋರುವ ಬಣ್ಣ ಬಣ್ಣದ ರಂಗೋಲಿಗಳ ಚಿತ್ತಾರ ಹಬ್ಬಕ್ಕೆ ಮೆರುಗು ನೀಡಿತು. ಕಬ್ಬು, ಅವರೆಕಾಯಿ, ಕಡಲೆಕಾಯಿ, ಸಿಹಿ ಗೆಣಸು ಗೋವುಗಳಿಗೆ ತಿನ್ನಿಸುವ ಮೂಲಕ ರೈತರು ಪೂಜಿಸಿದರು.

ಗ್ರಾಮೀಣ ಪ್ರದೇಶದಲ್ಲಿ ಸಂಕ್ರಾಂತಿಯಂದು ಪ್ರತಿ ವರ್ಷದಂತೆ ಈ ಬಾರಿಯೂ ಕಾಟಿಮರಾಯನ ಹಬ್ಬದ ಆಚರಣೆ ನಡೆಯಿತು. ರೈತರು ತಮ್ಮ ರಾಸುಗಳಿಗೆ ವಿಶೇಷ ಪೂಜೆ ಸಲ್ಲಿಸುವ, ಕಾಟಿಮರಾಯನಿಗೆ ಹರಕೆ ತೀರಿಸುವ ಅಚರಣೆ ನಡೆಯಿತು.

ADVERTISEMENT

ರೈತನ ದುಡಿಮೆಯಲ್ಲಿ ಭಾಗಿಯಾಗುವ ರಾಸುಗಳಿಗೆ ಸಂಕ್ರಾಂತಿಯಂದು ವಿಶೇಷ ಆತಿಥ್ಯ. ರಾಸುಗಳಿಗೆ ಮೈ ತೊಳೆದು, ಕೊಂಬುಗಳಿಗೆ ಬಣ್ಣ ಬಳಿದು ಬಲೂನು, ಬಣ್ಣದ ಟೇಪು ಕಟ್ಟಿ ಅಲಂಕಾರ ಮಾಡಲಾಗಿತ್ತು.

ಕಾಡನೂರು ಗ್ರಾಮದಲ್ಲಿ ಕಾಟಿಮರಾಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯ ನಡೆಯಿತು. ವಿವಿಧ ಗ್ರಾಮಗಳ ಊರಿನ ಪ್ರಮುಖ ರಸ್ತೆಯಲ್ಲಿ ಸಂಜೆ ರಾಸುಗಳಿಗೆ ವಿಶೇಷ ಅಲಂಕಾರ ಮಾಡಿ ಕಿಚ್ಚು ಹಾಯಿಸಲಾಯಿತು.

ಕುಂಟನಹಳ್ಳಿ, ದೊಡ್ಡತುಮಕೂರು,ಚಿಕ್ಕತುಮಕೂರು, ಮಜರಾಹೊಸಹಳ್ಳಿ, ಮೆಳೇಕೋಟೆ, ತೂಬಗೆರೆ,ಲಘುಮೇನಹಳ್ಳಿ, ಸಾಸಲು,ಚಿಕ್ಕಬೆಳವಂಗಲ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ರಾಸುಗಳಿಗೆ ವಿಶೇಷ ಅಲಂಕಾರ ಮಾಡಿ ಕಿಚ್ಚು ಹಾಯಿಸುವ ಆಚರಣೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.