ADVERTISEMENT

ಮಲ್ಲಾತಹಳ್ಳಿ ಎಂಪಿಸಿಎಸ್‌ಗೆ ₹ 2.17 ಲಕ್ಷ ನಿವ್ವಳ ಲಾಭ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2019, 13:49 IST
Last Updated 2 ಅಕ್ಟೋಬರ್ 2019, 13:49 IST
ಸಂಘಕ್ಕೆ ಅತಿ ಹೆಚ್ಚು ಹಾಲು ಸರಬರಾಜು ಮಾಡಿದ ಸದಸ್ಯರಿಗೆ ಹಾಲಿನ ಕ್ಯಾನ್‍ಗಳನ್ನು ಸಂಘದ ಅಧ್ಯಕ್ಷ ವಿ.ನಾಗರಾಜ್ ವಿತರಿಸಿದರು
ಸಂಘಕ್ಕೆ ಅತಿ ಹೆಚ್ಚು ಹಾಲು ಸರಬರಾಜು ಮಾಡಿದ ಸದಸ್ಯರಿಗೆ ಹಾಲಿನ ಕ್ಯಾನ್‍ಗಳನ್ನು ಸಂಘದ ಅಧ್ಯಕ್ಷ ವಿ.ನಾಗರಾಜ್ ವಿತರಿಸಿದರು   

ದೊಡ್ಡಬಳ್ಳಾಪುರ: ತಾಲ್ಲೂಕಿನ ಮಲ್ಲಾತಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆ ಸಂಘದ ಆವರಣದಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ವಿ.ನಾಗರಾಜ್ ಮಾತನಾಡಿ, ಈ ಸಾಲಿನಲ್ಲಿ ಸಂಘವು ₹2.17 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಹಾಲಿನ ಬಿಲ್‍ಗಳಿಗೆ ಅನುಸಾರವಾಗಿ ₹100ಗಳಿಗೆ ₹2.19 ಬೋನಸ್ ನೀಡಲಾಗುತ್ತಿದೆ. ಸಂಘದ ಸಾಧನೆ ಮುಂದುವರೆಯಬೇಕಾದರೆ ಸದಸ್ಯರು ಗುಣಮಟ್ಟದ ಹಾಲನ್ನು ಸರಬರಾಜು ಮಾಡಿ ಸಂಘದ ಏಳಿಗೆಗೆ ಶ್ರಮಿಸಬೇಕು ಎಂದರು.

ಸಭೆಯಲ್ಲಿ ಸಂಘದ ಮುಖ್ಯ ಕಾರ್ಯನಿರ್ವಾಹಕ ಎಂ.ಸಿ.ಆನಂದಮೂರ್ತಿ ಸಂಘದ ನಿರ್ದೇಶಕರು ಹಾಗೂ ಸದಸ್ಯರು ಹಾಜರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.