ದೊಡ್ಡಬಳ್ಳಾಪುರ: ತಾಲ್ಲೂಕಿನ ಸೋತೆನಹಳ್ಳಿ ಗ್ರಾಮದಲ್ಲಿಮಂಗಳವಾರ ಮಧ್ಯಾಹ್ನ ಕೃಷಿ ಹೊಂಡಕ್ಕೆ ಕಾಲು ಜಾರಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಸೋತೆನಹಳ್ಳಿ ಗ್ರಾಮದ ತೋಟವೊಂದರ ಕೃಷಿ ಹೊಂಡದಲ್ಲಿ ನೀರು ತರಲು ಹೋಗಿದ್ದ ಕೇಶವ (45) ಜಾರಿ ಬಿದ್ದು ಮೃತಪಟ್ಟಿದ್ದಾರೆ.
ಕೆಜಿಎಫ್ ಮೂಲದ ಕೇಶವ ಕುಟುಂಬ ಕೆಲಸಕ್ಕಾಗಿ ಸೋತೇನಹಳ್ಳಿಯಲ್ಲಿ ವಾಸವಾಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಮೃತರಿಗೆ ಪತ್ನಿ, ಪುತ್ರಿ, ಪುತ್ರ ಇದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.