ADVERTISEMENT

ಇಂದು ಆರೋಗ್ಯ ಕಡೆಗೆ ಮ್ಯಾರಥಾನ್

​ಪ್ರಜಾವಾಣಿ ವಾರ್ತೆ
Published 23 ಜನವರಿ 2021, 1:29 IST
Last Updated 23 ಜನವರಿ 2021, 1:29 IST
ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಜಯಸ್ವಾಮಿ ಮಾತನಾಡಿದರು
ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಜಯಸ್ವಾಮಿ ಮಾತನಾಡಿದರು   

ದೊಡ್ಡಬಳ್ಳಾಪುರ: ಸಿರಿ ಧಾನ್ಯಕ್ಕೆ ವ್ಯಾಪಕ ಪ್ರಚಾರ ನೀಡಲು ಸಾವಯವ ಉತ್ಪನ್ನಗಳ ಮಾರುಕಟ್ಟೆಗೆ ಹೆಚ್ಚಿನ ಅವಕಾಶ ಕಲ್ಪಿಸಲು ಜ.23ರಂದು ಬೆಳಿಗ್ಗೆ 7ಕ್ಕೆ ನಗರದಲ್ಲಿ ‘ಸಿರಿಧಾನ್ಯ ನಡಿಗೆ ಆರೋಗ್ಯದ ಕಡೆಗೆ’ ಮ್ಯಾರಥಾನ್ ಆಯೋಜಿಸಲಾಗಿದೆ ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಜಯಸ್ವಾಮಿ ತಿಳಿಸಿದರು.

ಈ ಬಗ್ಗೆ ಮಾಹಿತಿ ನೀಡಿ ಜ.23ರಂದು ಬೆಳಿಗ್ಗೆ 7ಕ್ಕೆ ಸಿರಿಧಾನ್ಯ ನಡಿಗೆ ನಗರದ ಪ್ರವಾಸಿ ಮಂದಿರ ವೃತ್ತದಿಂದ ಆರಂಭವಾಗಲಿದೆ. ನಡಿಗೆ ಕಾರ್ಯಕ್ರಮಕ್ಕೆ ಶಾಸಕ ಟಿ.ವೆಂಕಟರಮಣಯ್ಯ ಚಾಲನೆ ನೀಡಲಿದ್ದಾರೆ. ಮ್ಯಾರಥಾನ್‌ಲ್ಲಿ ಸುಮಾರು 500ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಜ.22 ರಿಂದ ನೋಂದಣಿ ಕಾರ್ಯ ನಡೆಯಲಿದೆ. ನಡಿಗೆಯಲ್ಲಿ ಭಾಗವಹಿಸುವವರಿಗೆ ಟಿ ಷರ್ಟ್ ನೀಡಲಾಗುತ್ತಿದೆ. ಪ್ರವಾಸಿ ಮಂದಿರ ವೃತ್ತದಿಂದ ಕೋರ್ಟ್ ರಸ್ತೆ, ತಾಲ್ಲೂಕು ಕಚೇರಿ ರಸ್ತೆ, ಬಸವ ಭವನದ ಮೂಲಕ ಮೂರು ಕಿ.ಮಿ ಸಾಗಿ ಮತ್ತೆ ಪ್ರವಾಸಿ ಮಂದಿರ ವೃತ್ತದಲ್ಲಿ ಕೊನೆಯಾದಲಿದೆ ಎಂದರು.

ಜ.26 ರಂದು ತಾಲ್ಲೂಕಿನ ಹಾಡೋನಹಳ್ಳಿಯಲ್ಲಿನ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಸಿರಿಧಾನ್ಯ ಹಬ್ಬ ಮತ್ತು ಕಿಸಾನ್ ಮೇಳ -2021 ಆಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಜನ ಪ್ರತಿನಿಧಿಗಳು, ರೈತರು, ರೈತ ಮಹಿಳೆಯರು, ಸಾವಯವ, ಸಿರಿಧಾನ್ಯ ಬೆಳೆಗಾರರು ಭಾಗವಹಿಸಲಿದ್ದಾರೆ.

ADVERTISEMENT

ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ, ತಾಂತ್ರಿಕ ಅಧಿಕಾರಿ ರೂಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.