ADVERTISEMENT

ಆನೇಕಲ್: ಮಾಸ್ತೇನಹಳ್ಳಿ ವೀರಭದ್ರ ರಥೋತ್ಸವ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2023, 4:47 IST
Last Updated 29 ಮಾರ್ಚ್ 2023, 4:47 IST
ಆನೇಕಲ್ ತಾಲ್ಲೂಕಿನ ಮಾಸ್ತೇನಹಳ್ಳಿಯ ವೀರಭದ್ರಸ್ವಾಮಿ ಮಹಾರಥೋತ್ಸವ ವಿಜೃಂಭಣೆಯಿಂದ ನಡೆಯಿತು
ಆನೇಕಲ್ ತಾಲ್ಲೂಕಿನ ಮಾಸ್ತೇನಹಳ್ಳಿಯ ವೀರಭದ್ರಸ್ವಾಮಿ ಮಹಾರಥೋತ್ಸವ ವಿಜೃಂಭಣೆಯಿಂದ ನಡೆಯಿತು   

ಆನೇಕಲ್: ಮಾಸ್ತೇನಹಳ್ಳಿಯ ವೀರಭದ್ರಸ್ವಾಮಿ ರಥೋತ್ಸವ ಮಂಗಳವಾರ ವಿಜೃಂಭಣೆಯಿಂದ ನಡೆಯಿತು. ಸುತ್ತಮುತ್ತಲ ಗ್ರಾಮಗಳ ಭಕ್ತರು ಸೇರಿದಂತೆ ಸಹಸ್ರಾರು ಭಕ್ತರು ಉತ್ಸವದಲ್ಲಿ ಭಾಗಿಗಳಾಗಿದ್ದರು.

ಮಂಗಳವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಅಲಂಕೃತ ಉತ್ಸವ ಮೂರ್ತಿಯನ್ನು ರಥದಲ್ಲಿ ಕುಳ್ಳರಿಸಲಾಯಿತು. ಅರ್ಚಕರು ಧಾರ್ಮಿಕ ಆಚರಣೆಗಳನ್ನು ನೆರವೇರಿಸಿದ ನಂತರ ರಾಜಾಪುರ ಸಂಸ್ಥಾನ ಮಠದ ಡಾ. ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ, ಬೆಳ್ಳಾವಿ ಮಹಂತ ಶಿವಾಚಾರ್ಯ ಸ್ವಾಮೀಜಿ, ನಾಗಲಾಪುರ ಮಠದ ತೇಜೇಶ್ವರಲಿಂಗ ಶಿವಾಚಾರ್ಯ ಸ್ವಾಮೀಜಿ ಅವರು ರಥೋತ್ಸವಕ್ಕೆ ಚಾಲನೆ ನೀಡಿದರು. ವೀರಗಾಸೆ, ಡೊಳ್ಳು ಕುಣಿತ, ಪೂಜಾ ಕುಣಿತ, ನಂದಿಧ್ವಜ ಸೇರಿದಂತೆ ವಿವಿಧ ಜಾನಪದ ಕಲಾ ತಂಡಗಳು ರಥೋತ್ಸವದಲ್ಲಿ ಪ್ರದರ್ಶನ ನೀಡಿ ರಥೋತ್ಸವಕ್ಕೆ ಮೆರುಗು ನೀಡಿದವು.

ರಥೋತ್ಸವಕ್ಕೆ ಚಾಲನೆ ನೀಡುತ್ತಿದ್ದಂತೆ ರಥ ಬೀದಿಗಳಲ್ಲಿ ಜಮಾವಣೆಗೊಂಡ ಭಕ್ತರು ದವನ ಚುಚ್ಚಿದ ಬಾಳೆಹಣ್ಣನ್ನು
ಎಸೆಯುವ ಮೂಲಕ ತಮ್ಮ ಭಕ್ತಿ ಸಮರ್ಪಿಸಿದರು. ಆನೇಕಲ್‌ ಯೋಜನಾ ಪ್ರಾಧಿಕಾರದ ಅಧ್ಯಕ್ಷ
ರಾಜಶೇಖರರೆಡ್ಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮುನಿರತ್ನಮ್ಮ
ಮುನಿರಾಜು, ಉಪಾಧ್ಯಕ್ಷ ಎಚ್.ಜೆ.ಪ್ರಸನ್ನಕುಮಾರ್, ಎಂ.ಬಾಬುರೆಡ್ಡಿ, ದೊಮ್ಮಸಂದ್ರ ಜಯಣ್ಣ, ರಾಜಾಪುರ ಪ್ರಕಾಶ್‌, ಹಿನ್ನಕ್ಕಿ ಜಯಣ್ಣ, ವೀರಭದ್ರ ಸ್ವಾಮಿ ದೇವಾಲಯ ಟ್ರಸ್ಟ್‌ ಅಧ್ಯಕ್ಷ ಡಿ.ಆರ್. ಜಯರಾಜ್, ಕಾರ್ಯದರ್ಶಿ ನಂಜಪ್ಪ, ಖಜಾಂಚಿ ಕಿರಣ್‌ ಪ್ರಕಾಶ್‌, ಪದಾಧಿಕಾರಿಗಳಾದ ನಿರಂಜನಮೂರ್ತಿ, ವೆಂಕಟಸ್ವಾಮಿ, ಆರ್.ಈಶ್ವರಯ್ಯ, ಪರಮಶಿವಯ್ಯ, ರಾಜಶೇಖರ್, ಮರಿರಾಜು, ಗ್ರಾಮ ಪಂಚಾಯಿತಿ ಸದಸ್ಯ ಲಲಿತಾ ಗುರುದೇವ್‌, ಎಂ.ಕೃಷ್ಣಪ್ಪ, ಕಾಂತರಾಜು, ಭವಾನಿ ಅಂಬರೀಶ್ ಇದ್ದರು.

ADVERTISEMENT

ಅಗ್ನಿಕೊಂಡ : ಮಾಸ್ತೇನಹಳ್ಳಿ ವೀರಭದ್ರಸ್ವಾಮಿ ದೇವಾಲಯದಲ್ಲಿ ರಥೋತ್ಸವದ ಅಂಗವಾಗಿ ಅಗ್ನಿಕೊಂಡ ಮಹೋತ್ಸವ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.