ADVERTISEMENT

ದೇವನಹಳ್ಳಿ: ಮುಖ್ಯ ಚುನಾವಣಾಧಿಕಾರಿ ಭೇಟಿ

​ಪ್ರಜಾವಾಣಿ ವಾರ್ತೆ
Published 15 ಜುಲೈ 2021, 4:04 IST
Last Updated 15 ಜುಲೈ 2021, 4:04 IST
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆವರಣದಲ್ಲಿ ನಿರ್ಮಿಸಿರುವ ವಿದ್ಯುನ್ಮಾನ ಮತ ಯಂತ್ರಗಳ ಉಗ್ರಾಣ ಕಟ್ಟಡಕ್ಕೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಡಾ.ಸಂಜೀವ್ ಕುಮಾರ್ ಮತ್ತು ಕೇಂದ್ರ ಚುನಾವಣಾ ಆಯೋಗದ ಉಪ ಆಯುಕ್ತ ನಿತೇಶ್ ವ್ಯಾಸ್ ಭೇಟಿ ನೀಡಿ ಪರಿಶೀಲಿಸಿದರು

ದೇವನಹಳ್ಳಿ: ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆವರಣದಲ್ಲಿ ನಿರ್ಮಿಸಿರುವ ವಿದ್ಯುನ್ಮಾನ ಮತಯಂತ್ರಗಳ ಉಗ್ರಾಣ ಕಟ್ಟಡಕ್ಕೆ ಬುಧವಾರರಾಜ್ಯ ಮುಖ್ಯ ಚುನಾವಣಾಧಿಕಾರಿ ಡಾ.ಸಂಜೀವ್ ಕುಮಾರ್ ಮತ್ತು ಕೇಂದ್ರ ಚುನಾವಣಾ ಆಯೋಗದ ಉಪ ಆಯುಕ್ತ ನಿತೇಶ್ ವ್ಯಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಕಟ್ಟಡದ ಆವರಣದಲ್ಲಿ ಗಿಡ ನೆಟ್ಟು ನೀರೆರದರು. ಚುನಾವಣಾ ಆಯೋಗದ ಜಂಟಿ ಆಯುಕ್ತ ರಾಘವೇಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಆರ್. ರವಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೋನ ವಂಶಿಕೃಷ್ಣ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಜಗದೀಶ ಕೆ. ನಾಯಕ, ಉಪ ವಿಭಾಗಾಧಿಕಾರಿ ಅರುಳ್‌ಕುಮಾರ್, ಜಿಲ್ಲಾಧಿಕಾರಿ ಕಚೇರಿಯ ಸಹಾಯಕ ರಾಜೀವಲೋಚನಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT