ಅಧಿಕಾರಿಗಳಿಗೆ ಕೃಷ್ಣಬೈರೇಗೌಡ ತರಾಟೆ
– ಪ್ರಜಾವಾಣಿ ಚಿತ್ರ
ದೊಡ್ಡಬಳ್ಳಾಪುರ: ತಾಲ್ಲೂಕು ಕಚೇರಿ, ಉಪವಿಭಾಗಧಿಕಾರಿ ಕಚೇರಿಗೆ ಗುರುವಾರ ಬೆಳಗ್ಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಖಾಸಗಿ ವಾಹನದಲ್ಲಿ ಬಂದು, ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೆಳಿಗ್ಗೆ 10.30 ಅಗಿದ್ದರೂ ಯಾರೊಬ್ಬ ಅಧಿಕಾರಿಗಳು ಕಚೇರಿಗೆ ಬಾರದೆ ಇರುವ ಬಗ್ಗೆ ಜಿಲ್ಲಾಧಿಕಾರಿಗೆ ಕರೆ ಮಾಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಸಚಿವರ ಭೇಟಿ ಅರ್ಧ ಗಂಟೆ ನಂತರ ವಿಷಯ ಕಾರ್ಯ ನಿರ್ವಾಹಕರು ಮಾತ್ರ ಬಂದರು. 10.30 ಅಗಿದ್ದರು ಸಹ ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡದೆ, ಅನ್ಯ ಕಾರ್ಯ ನಿಮಿತ್ತ ಹೊರಗೆ ಹೋಗಿರುವ ಬಗ್ಗೆ ಹಾಜರಾತಿ ಪುಸ್ತಕದಲ್ಲಿ ನನೂದಿಸದೆ ಇರುವ ಬಗ್ಗೆಯೂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.