ADVERTISEMENT

ಮೀಸಲು ಕ್ಷೇತ್ರದಲ್ಲಿ ಅಭಿವೃದ್ಧಿಯ ಭರವಸೆ ನೀಡಿದ ಪ್ರಿಯಾಂಕ ಖರ್ಗೆ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2018, 12:55 IST
Last Updated 17 ಅಕ್ಟೋಬರ್ 2018, 12:55 IST
ಸಚಿವ ಪ್ರಿಯಾಂಕ ಖರ್ಗೆಯೊಂದಿಗೆ  ಕೆ.ಪಿ.ಸಿ.ಸಿ ಜಿಲ್ಲಾ ಎಸ್ಸಿ ಘಟಕ ಅಧ್ಯಕ್ಷ ಲೋಕೇಶ್.
ಸಚಿವ ಪ್ರಿಯಾಂಕ ಖರ್ಗೆಯೊಂದಿಗೆ  ಕೆ.ಪಿ.ಸಿ.ಸಿ ಜಿಲ್ಲಾ ಎಸ್ಸಿ ಘಟಕ ಅಧ್ಯಕ್ಷ ಲೋಕೇಶ್.   

ದೇವನಹಳ್ಳಿ: ರಾಜ್ಯದ ಸಮ್ಮಿಶ್ರ ಸರ್ಕಾರದಲ್ಲಿ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುವುದಾಗಿ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ ಎಂದು ಕೆ.ಪಿ.ಸಿ.ಸಿ ಜಿಲ್ಲಾ ಘಟಕದ ಅಧ್ಯಕ್ಷ ಚೌಡಪ್ಪನಹಳ್ಳಿ ಲೋಕೇಶ್ ತಿಳಿಸಿದರು.

ಪ್ರಜಾವಾಣಿಯೊಂದಿಗೆ ಮಾತನಾಡಿದ ಅವರು, ಈ ಹಿಂದಿನ ಕಾಂಗ್ರೆಸ್ ಆಡಳಿತದಲ್ಲಿ ಪರಿಶಿಷ್ಟರಿಗೆ ಮೀಸಲಾಗಿದ್ದ ಅನುದಾನವನ್ನು ಅಧಿಕಾರಿಗಳು ಸಮರ್ಪಕವಾಗಿ ಬಳಕೆ ಮಾಡಿರಲಿಲ್ಲ ಎಂದರು.

ಪರಿಶಿಷ್ಟರ ಅನುದಾನ ಸದ್ಬಳಕೆಗೆ ಆಸಕ್ತಿ ವಹಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದೆಂದು ಈ ಬಾರಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ ಎಂದರು.

ADVERTISEMENT

ಇದರ ಹಿನ್ನಲೆಯಲ್ಲಿ ಪರಿಶಿಷ್ಟರ ವಿವಿಧ ಇಲಾಖೆಯ ಅನುದಾನ ಸಕಾಲದಲ್ಲಿ ಅರ್ಹರಿಗೆ ತಲುಪಬೇಕು ಎಂಬ ಉದ್ದೇಶವನ್ನು ಸರ್ಕಾರ ಹೊಂದಿದೆ ಎಂದು ಸಚಿವರು ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ನೆಲಮಂಗಲ ಮತ್ತು ದೇವನಹಳ್ಳಿ ಮೀಸಲು ವಿಧಾನಸಭಾ ಕ್ಷೇತ್ರಗಳಿವೆ. ದೊಡ್ಡಬಳ್ಳಾಪುರ ಹಾಗೂ ಹೊಸಕೋಟೆ ಕ್ಷೇತ್ರಗಳಲ್ಲಿ ಹೆಚ್ಚಿನ ಪರಿಶಿಷ್ಟರಿದ್ದಾರೆ ಎಂದರು.

ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವ ತಾಲ್ಲೂಕುಗಳಲ್ಲಿ ಭೂಮಿ ಬೆಲೆ ಗಗನಕ್ಕೇರಿದೆ. 25 ವರ್ಷಗಳಿಂದ ತಾಲ್ಲೂಕಿನಲ್ಲಿ ನಿವೇಶನ ವಿತರಣೆಯಾಗಿಲ್ಲ, ಅರ್ಹರಿಗೆ ವಿವೇಶನ ನೀಡಲು ಕನಿಷ್ಠ 15 ರಿಂದ 20 ಎಕರೆ ಜಾಗ ಗುರುತಿಸಿ ನಿವೇಶನ ನೀಡಿ ವಸತಿ ಸೌಲಭ್ಯ ಕಲ್ಪಸುವಂತೆ ಸಚಿವರಿಗೆ ಮನವರಿಕೆ ಮಾಡಲಾಗಿದ್ದು ಭರವಸೆಯೂ ಸಿಕ್ಕಿದೆ ಎಂದರು.

ದೇವನಹಳ್ಳಿ ಪುರಸಭೆ ಅಧ್ಯಕ್ಷ ಎಂ.ಮೂರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.