ADVERTISEMENT

ಸಚಿವ, ಶಾಸಕರ ಬೆಂಬಲಿಗರ ನಡುವೆ ಮಾತಿನ ಚಕಮಕಿ

​ಪ್ರಜಾವಾಣಿ ವಾರ್ತೆ
Published 31 ಜನವರಿ 2021, 4:17 IST
Last Updated 31 ಜನವರಿ 2021, 4:17 IST
ಹೊಸಕೋಟೆಯಲ್ಲಿ ನಡೆದ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸುವ ಕಾರ್ಯಕ್ರಮಕ್ಕೆ ಶಾಸಕ ಶರತ್ ಬಚ್ಚೇಗೌಡ ಅವರಿಗೆ ಅಹ್ವಾನ ನೀಡಿಲ್ಲವೆಂದು  ಬೆಂಬಲಿಗರು ಮುಖಂಡ ಭೈರೇಗೌಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಬೆಂಬಲಿಗರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು
ಹೊಸಕೋಟೆಯಲ್ಲಿ ನಡೆದ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸುವ ಕಾರ್ಯಕ್ರಮಕ್ಕೆ ಶಾಸಕ ಶರತ್ ಬಚ್ಚೇಗೌಡ ಅವರಿಗೆ ಅಹ್ವಾನ ನೀಡಿಲ್ಲವೆಂದು  ಬೆಂಬಲಿಗರು ಮುಖಂಡ ಭೈರೇಗೌಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಬೆಂಬಲಿಗರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು   

ಹೊಸಕೋಟೆ: ವಿಶೇಷ ಅನುದಾನದಡಿ ವಿವಿಧ ಕಾಮಗಾರಿಗಳ ಉದ್ಘಾಟನೆಗೆ ಸ್ಥಳೀಯ ಶಾಸಕರಿಗೆ ಆಹ್ವಾನ ನೀಡಿಲ್ಲ ಎಂದು ಆರೋಪಿಸಿ ಶರತ್ ಬಚ್ಚೇಗೌಡ ಅವರ ಬೆಂಬಲಿಗರು ಕಾಮಗಾರಿಗೆ ಚಾಲನೆ ನೀಡಲು ಬಂದ ಸಚಿವ ಎಂ.ಟಿ.ಬಿ. ನಾಗರಾಜ್‌ ಅವರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಘಟನೆ ನಡೆಯಿತು.

ಈ ವೇಳೆ ಪೊಲೀಸರು ಮತ್ತು ಶಾಸಕರ ಬೆಂಬಲಿಗರ ಮಧ್ಯೆ ಮಾತಿನ ಚಕಮಕಿ ನಡೆಯಿತು.

ಪ್ರತಿಭಟನೆ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಲಾಠಿ ಪ್ರಹಾರದಲ್ಲಿ ಸ್ವಾಭಿಮಾನಿ ಮುಖಂಡರಾದ ಭೈರೇಗೌಡ, ಸುಬ್ಬರಾಜು ಸೇರಿದಂತೆ ಹಲವು ಗಾಯಗೊಂಡರು.

ADVERTISEMENT

ಈ ಕುರಿತು ‍ಪ್ರತಿಕ್ರಿಯಿಸಿದ ಎಂ.ಟಿ.ಬಿ. ನಾಗರಾಜ್‌, ಶಾಸಕರಿಗೆ ಆಹ್ವಾನ ನೀಡುವುದು ನಗರಸಭೆ ಪೌರಾಯುಕ್ತರ ಕೆಲಸ. ಅವರು ಮತ್ತು ಎಂಜಿನಿಯರ್ ಶಾಸಕರ ಮನೆಗೆ ಹೋಗಿ ಅವರನ್ನು ಆಹ್ವಾನಿಸಿದ್ದರೂ ಪೂಜಾ ಕಾರ್ಯಕ್ರಮಕ್ಕೆ ಬರಲಿಲ್ಲ ಎಂದರು.

ನಗರಸಭೆ ಅಧ್ಯಕ್ಷ ಅರುಣ್ ಕುಮಾರ್ ಮಾತನಾಡಿ, ಕಳೆದ ಒಂದೂವರೆ ವರ್ಷದಿಂದ ನಗರದಲ್ಲಿ ಯಾವುದೇ ಕಾಮಗಾರಿ ನಡೆದಿರಲಿಲ್ಲ. ಶಾಸಕರ ಅನುದಾನದಲ್ಲಿ ಯಾವುದೇ ಕೆಲಸ ನಡೆಯಲಿಲ್ಲ. ಈಗ ಮತ್ತೆ ಎಂ.ಟಿ.ಬಿ. ನಾಗರಾಜ್ ಸಚಿವರಾದ ಮೇಲೆ ಮತ್ತೆ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ. ಅಭಿವೃದ್ಧಿ ಕಾರ್ಯಕ್ಕೆ ಶಾಸಕರು ಬೆಂಬಲಿಸದೆ ಅಡ್ಡಿ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.