ಪ್ರಜಾವಾಣಿ ವಾರ್ತೆ
ದೊಡ್ಡಬಳ್ಳಾಪುರ: ಹೊರವಲಯದ ಪಾಲನಜೋಗಿಹಳ್ಳಿಯ ಮನೆಯೊಂದರಲ್ಲಿ ಬಾಲಕಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೃತ ಬಾಲಕಿಯ ಪೋಷಕರು ಬಾಗೇಪಲ್ಲಿ ಮೂಲದವರಾಗಿದ್ದು, ಹಲವು ವರ್ಷಗಳಿಂದ ಪಾಲನಜೋಗಿಹಳ್ಳಿಯಲ್ಲಿನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಗೌರಿಬಿದನೂರಿನಲ್ಲಿ ಪಿಯುಸಿ ಓದುತ್ತಿದ್ದ ಮೃತ ಬಾಲಕಿ, ಶನಿವಾರ ಕಾಲೇಜು ಮುಗಿಸಿ ಬಂದವಳು ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.