
ಸಾವು (ಪ್ರಾತಿನಿಧಿಕ ಚಿತ್ರ)
ಆನೇಕಲ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ 9ನೇ ತರಗತಿ ವಿದ್ಯಾರ್ಥಿನಿಯನ್ನು ಪ್ರೀತಿಯ ಹೆಸರಿನಲ್ಲಿ ಪುಸಲಾಯಿಸಿ ಬೈಕ್‌ನಲ್ಲಿ ಕರೆದೊಯ್ಯುತ್ತಿದ್ದಾಗ ಹೊಸಕೋಟೆ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಾಲಕಿ ಮೃತಪಟ್ಟಿದ್ದಾಳೆ.
ಪ್ರಕರಣದಲ್ಲಿ ಭಾಗಿಯಾಗಿದ್ದ ಬಾಲಕ ಸೇರಿದಂತೆ ನಾಲ್ವರು ಆರೋಪಿಗಳನ್ನು ಬನ್ನೇರುಘಟ್ಟ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮನೋಜ್, ಇರ್ಫಾನ್, ಮುಬಾರಕ್ ವಿರುದ್ಧ ಅಪಹರಣ ಮತ್ತು ಪೋಕ್ಸೊ ಅಡಿ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿನಿಯನ್ನು ಪರಿಚಯ ಮಾಡಿಕೊಂಡಿದ್ದ ಮನೋಜ್, ಆಕೆ ಶಾಲೆಗೆ ಹೋಗುವಾದ ಹಿಂದೆ ಬಿದ್ದು ಪ್ರೀತಿಸುವಂತೆ ಪೀಡಿಸುತ್ತಿದ್ದ. ಪ್ರೀತಿ ಮಾಡುವುದಾಗಿ ಬಾಲಕಿಯನ್ನು ಪುಸಲಾಯಿಸಿ ಅ.24ರಂದು ಆಕೆಯನ್ನು ಬಲವಂತವಾಗಿ ಕರೆದೊಯ್ದಿದ್ದ.
ಮನೋಜ್, ವಿದ್ಯಾರ್ಥಿನಿ ಹಾಗೂ ಮತ್ತೊಬ್ಬ ಬೈಕ್‌ಗಳಲ್ಲಿ ಹೊಸಕೋಟೆಗೆ ತೆರಳಿದ್ದರು. ಮನೋಜ್, ಬಾಲಕಿ ಸಂಚರಿಸುತ್ತಿದ್ದ ಬೈಕ್ ಹೊಸಕೋಟೆ ಬಳಿ ಬೈಕ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆಯಿತು. ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಹೊಸಕೋಟೆ ಪೊಲೀಸರು ಬಾಲಕಿಯ ಪೋಷಕರಿಗೆ ಕರೆ ಮಾಡಿ ಬಾಲಕಿ ಮೃತಪಟ್ಟಿರುವ ಬಗ್ಗೆ ತಿಳಿಸಿದ್ದಾರೆ.
ಆರೋಪಿಗಳು ಬಾಲಕಿಯನ್ನು ಬಲವಂತವಾಗಿ ಕರೆದೊಯ್ದು ಲೈಂಗಿಕವಾಗಿ ಬಳಸಿಕೊಳ್ಳಲು ಪ್ರಯತ್ನಿಸಿದ್ದರು ಎಂದು ಪೋಷಕರು ದೂರಿನಲ್ಲಿ ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.