ADVERTISEMENT

ಆನೇಕಲ್: ಶೇ 69.7ರಷ್ಟು ಮತದಾನ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2020, 4:04 IST
Last Updated 29 ಅಕ್ಟೋಬರ್ 2020, 4:04 IST
ಆನೇಕಲ್‌ನ ಮತಗಟ್ಟೆಯಲ್ಲಿ ಮತ ಚಲಾಯಿಸಲು ಸರದಿ ಸಾಲಿನಲ್ಲಿ ನಿಂತಿರುವ ಶಿಕ್ಷಕರು
ಆನೇಕಲ್‌ನ ಮತಗಟ್ಟೆಯಲ್ಲಿ ಮತ ಚಲಾಯಿಸಲು ಸರದಿ ಸಾಲಿನಲ್ಲಿ ನಿಂತಿರುವ ಶಿಕ್ಷಕರು   

ಆನೇಕಲ್:ವಿಧಾನ ಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ತಾಲ್ಲೂಕಿನಲ್ಲಿ ಶೇಕಡ 69.7ರಷ್ಟು ಮತದಾನವಾಗಿದೆ ಎಂದು ತಹಶೀಲ್ದಾರ್‌ ಸಿ. ಮಹಾದೇವಯ್ಯ ತಿಳಿಸಿದ್ದಾರೆ.

ತಾಲ್ಲೂಕಿನಲ್ಲಿ ಒಟ್ಟು 1,185 ಮತದಾರರಿದ್ದರು. ಈ ಪೈಕಿ 823 ಮಂದಿ ಮತ ಚಲಾಯಿಸಿದ್ದಾರೆ. ತಾಲ್ಲೂಕು ಪಂಚಾಯಿತಿ ಆವರಣದ ಸಾಮರ್ಥ್ಯ ಸೌಧದಲ್ಲಿ ಎರಡು ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಬೆಳಿಗ್ಗಿನಿಂದಲೂ ಶಿಕ್ಷಕರು ಸರದಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು. ಖಾಸಗಿ ಶಾಲೆಯ ಶಿಕ್ಷಕರು ಶಾಲಾ ಬಸ್‌ಗಳಲ್ಲಿ ಆಗಮಿಸಿ ಮತ ಚಲಾಯಿಸಿದರು. ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಮುಖಂಡರು ತಮ್ಮ ಅಭ್ಯರ್ಥಿಗಳ ಪರವಾಗಿ ಮತದಾರರನ್ನು ಓಲೈಸುತ್ತಿದ್ದ ದೃಶ್ಯ ಕಂಡು‌ಬಂದಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT