ಮೊಬೈಲ್
ಆನೇಕಲ್: ತಿಮ್ಮರಾಯಸ್ವಾಮಿ ದೇವಾಲಯ ರಸ್ತೆಯಲ್ಲಿ ಕೆಲಸಕ್ಕೆ ಹೋಗುತ್ತಿದ್ದ ವ್ಯಕ್ತಿಗೆ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದು ಮೊಬೈಲ್ ಕಸಿದು ಪರಾರಿಯಾಗಿದ್ದಾನೆ.
ಆನೇಕಲ್‌ನ ಬಾಬು ಗಾಯಗೊಂಡವರು.
ಮಗ್ಗದ ಕೆಲಸ ಮಾಡುತ್ತಿರುವ ಬಾಬು ಸೋಮವಾರ ಬೆಳಗ್ಗೆ 5.30ರ ಸುಮಾರಿಗೆ ಕೆಲಸಕ್ಕೆ ತೆರಳುತ್ತಿದ್ದಾಗ ಹಿಂಬದಿಯಿಂದ ಮಾಸ್ಕ್ ಧಾರಿವ್ಯಕ್ತಿ ಹಣಕ್ಕಾಗಿ ಬೇಡಿಕೆಯಿಟ್ಟಿದ್ದಾನೆ. ಹಣ ನೀಡದಿದ್ದಾಗ ಸಣ್ಣ ಚಾಕುವಿನಿಂದ ಕತ್ತಿಗೆ ಇರಿದು ಮೊಬೈಲ್ ಕಸಿದು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಯಾಳು ಬಾಬುನನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ವಿಕ್ಟೋರಿಯಾ ಆಸ್ಪತ್ರೆಗೆ ಮುಂದಿನ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಗಾಯಾಳುವಿನ ಕತ್ತಿಗೆ ನಾಲ್ಕು ಹೊಲಿಗೆ ಹಾಕಲಾಗಿದೆ.
ಸ್ಥಳಕ್ಕೆ ಡಿವೈಎಸ್ಪಿ ಮೋಹನ್ ಕುಮಾರ್, ಇನ್‌ಸ್ಪೆಕ್ಟರ್ ತಿಪ್ಪೇಸ್ವಾಮಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.