ADVERTISEMENT

ದೇವನಹಳ್ಳಿ: ಮೊಬೈಲ್ ಕಳ್ಳನನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2025, 2:05 IST
Last Updated 18 ಅಕ್ಟೋಬರ್ 2025, 2:05 IST
ಮೊಬೈಲ್ ಕಳವು ಮಾಡುತ್ತಿದ್ದ ವ್ಯಕ್ತಿ
ಮೊಬೈಲ್ ಕಳವು ಮಾಡುತ್ತಿದ್ದ ವ್ಯಕ್ತಿ   

ವಿಜಯಪುರ (ದೇವನಹಳ್ಳಿ): ಇಲ್ಲಿನ ಶುಕ್ರವಾರ ಸಂತೆಯಲ್ಲಿ ಮೊಬೈಲ್ ಕಳ್ಳತನ ಮಾಡಲು ಯತ್ನಿಸುತ್ತಿದ್ದ ಛತ್ತಿಸಗಡದ ವ್ಯಕ್ತಿಯೊಬ್ಬನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಮೊಬೈಲ್ ಕಳ್ಳನು ಪಟ್ಟಣದಲ್ಲಿ ಗಾರೆ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದ್ದು, ಆತನ ಬಳಿ ಒಟ್ಟು ನಾಲ್ಕು ಮೊಬೈಲ್ ಸಿಕ್ಕಿದೆ. ಆ ಪೈಕಿ ಒಂದನ್ನು ಪೊಲೀಸರು ಮಾಲೀಕರನ್ನು ಪತ್ತೆ ಹಚ್ಚಿ ಮೊಬೈಲ್ ಹಿಂದುರಿಗಿಸಿದ್ದಾರೆ. ಉಳಿದ ಮೂರು ಮೊಬೈಲ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮೊಬೈಲ್ ಕಳ್ಳನಿಂದ ಹೆಸರು, ವಿಳಾಸ ಬಾಯಿ ಬಿಡಿಸಲು ಪೊಲೀಸರು ಪ್ರಯತ್ನಿಸಿದರೂ ಆತ ಬಾಯಿ ಬಿಟ್ಟಿಲ್ಲ. ಆತನ ವಿವರಗಳನ್ನು ಕಲೆ ಹಾಕುವಲ್ಲಿ ಪೊಲೀಸರು ಮುಂದಾಗಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.