ADVERTISEMENT

ದೇವನಹಳ್ಳಿ | ನೀತಿ ಸಂಹಿತೆ: ಖಾಸಗಿ ವಿಮಾನಗಳ ಮೇಲೆ ನಿಗಾ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2024, 6:50 IST
Last Updated 1 ಏಪ್ರಿಲ್ 2024, 6:50 IST

ದೇವನಹಳ್ಳಿ: ಮಾದರಿ ನೀತಿ ಸಂಹಿತೆ ಸಮಪರ್ಕವಾಗಿ ಜಾರಿ ಮತ್ತು ಚುನಾವಣಾ ಅಕ್ರಮ ತಡೆಯುವ ನಿಟ್ಟಿನಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಫ್‌ಎಸ್‌ಟಿ (ನಿಗಾ ತಂಡ) ನಿಯೋಜಿಸಲು ಚುನಾವಣಾ ಆಯೋಗ ನಿರ್ದೇಶಿಸಿದೆ.

ಚುನಾವಣಾ ಆಯೋಗದ ಮಾರ್ಗಸೂಚಿ ಅನ್ವಯ ವಿಮಾನ ನಿಲ್ದಾಣದಲ್ಲಿ ಖಾಸಗಿ ವಿಮಾನಗಳ ಚಲನವಲನಗಳ ಮೇಲೆ ನಿಗಾ ವಹಿಸಿ,  ವ್ಯಕ್ತಿಗಳ ತಪಾಸಣೆ ಮಾಡಲಾಗುತ್ತದೆ. ಪ್ರತಿದಿನ ಇಲ್ಲಿ ನಡೆಯುವ ತಪಾಸಣಾ ವರದಿಯನ್ನು ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT