ADVERTISEMENT

ಬೆಲೆ ಏರಿಕೆ ಮೂಲಕ ಜನರ ಮೇಲೆ ಪ್ರಹಾರ: ಸುಧಾಕರ್‌ ಕಿಡಿ

ರಾಜ್ಯ ಸರ್ಕಾರ ವಿರುದ್ಧ ಡಾ.ಸುಧಾಕರ್‌ ಕಿಡಿ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2025, 14:23 IST
Last Updated 7 ಏಪ್ರಿಲ್ 2025, 14:23 IST
ಹೊಸಕೋಟೆ ತಾಲ್ಲೂಕಿನ ಚಿಕ್ಕಹುಲ್ಲೂರು ಗ್ರಾಮದಲ್ಲಿ ರಾಮನವಮಿ ಪ್ರಯುಕ್ತ ನಡೆದ ಉತ್ಸವದಲ್ಲಿ ಪೂಜೆ ಸಲ್ಲಿಸಿದ ಸಂಸದ ಡಾ.ಕೆ.ಸುಧಾಕರ್
ಹೊಸಕೋಟೆ ತಾಲ್ಲೂಕಿನ ಚಿಕ್ಕಹುಲ್ಲೂರು ಗ್ರಾಮದಲ್ಲಿ ರಾಮನವಮಿ ಪ್ರಯುಕ್ತ ನಡೆದ ಉತ್ಸವದಲ್ಲಿ ಪೂಜೆ ಸಲ್ಲಿಸಿದ ಸಂಸದ ಡಾ.ಕೆ.ಸುಧಾಕರ್   

ಹೊಸಕೋಟೆ: ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಕಾಂಗ್ರೆಸ್‌ ಸರ್ಕಾರ ಯಾವುದೇ ಜನಪರ ಕೆಲಸ ಮಾಡದೆ ಬೆಲೆ ಏರಿಕೆ ಮೂಲಕ ಜನರ ಮೇಲೆ ಪ್ರಹಾರ ನಡೆಸುತ್ತಿದೆ. ಸುಳ್ಳು ಹೇಳಿಕೊಂಡ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ಗೆ ಇನ್ನೇನು ಮಾಡಲು ಸಾಧ್ಯ? ಎಂದು ಸಂಸದ ಡಾ.ಕೆ. ಸುಧಾಕರ್‌ ಹೇಳಿದರು.

ರಾಮನವಮಿ ಪ್ರಯುಕ್ತ ತಾಲ್ಲೂಕಿನ ಚಿಕ್ಕಹುಲ್ಲೂರಿನ ಆಂಜಿನೇಯಸ್ವಾಮಿ ದೇವಾಲಯಕ್ಕೆ ಭಾನುವಾರ ಭೇಟಿ ನೀಡಿ ಮಾತನಾಡಿದರು.

ಮಕ್ಕಳು ಕಡಿಯುವ ಹಾಲಿನ ದರವನ್ನು ನಾಲ್ಕು ಭಾರಿ ಏರಿಕೆ ಮಾಡಿದ್ದಾರೆ. ಆದರೆ ರೈತರಿಗೆ ನೀಡುವ ದರ ಹಾಗೇ ಕಡಿಮೆ ಇದೆ. ವಿದ್ಯುತ್‌ ದರ ಮತ್ತು ಡಿಸೇಲ್ ಬೆಲೆ ಏರಿಕೆ ಮಾಡಿ ಜನ ಸಾಮಾನ್ಯರಿಗೆ ತೊಂದರೆ ನೀಡುತ್ತಿದೆ. ದಲಿತರ ಉದ್ಧಾರದ ಹೆಸರಲ್ಲಿ ಅಧಿಕಾರಕ್ಕೆ ಬಂದು ಪರಿಶಿಷ್ಟರ ಅನುದಾನವನ್ನು ಅವರ ಕಲ್ಯಾಣಕ್ಕೆ ಬಳಸದೆ ಬೆರೆ ಕೆಲಸಗಳಿಗೆ ಬಳಸಲಾಗುತ್ತಿದೆ ಎಂದರು.

ADVERTISEMENT

ಕಾಂಗ್ರೆಸ್ ಸರ್ಕಾರ ಯಾವುದೇ ಜನಪರ ಕೆಲಸ ಮಾಡಿಲ್ಲ. ಬಿಜೆಪಿ ಸರ್ಕಾರಗಳು ಮಾತ್ರ ಹಲವು ಜನಪರ ಕಾರ್ಯಗಳನ್ನು ಮಾಡಿವೆ. ಮುಂದಿನ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಎಂದು ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.