ADVERTISEMENT

ಮತದಾರರಿಗೆ ಹಂಚಲು ಕೊಟ್ಟಿದ್ದ ಹಣ ತಲುಪದ ಕಾರಣ ಸೋತೆ: ಎಂಟಿಬಿ ನಾಗರಾಜ್

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2024, 15:54 IST
Last Updated 11 ಏಪ್ರಿಲ್ 2024, 15:54 IST
<div class="paragraphs"><p>ಎಂಟಿಬಿ ನಾಗರಾಜ್‌ </p></div>

ಎಂಟಿಬಿ ನಾಗರಾಜ್‌

   

ಹೊಸಕೋಟೆ: ‘ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನ್ನ ಸೋಲಿಗೆ ಹಲವು ಕಾರಣಗಳಿರಬಹುದು. ಆದರೆ, ಮತದಾರರಿಗೆ ಹಂಚಲು ಕೊಟ್ಟಿದ್ದ ಹಣ ಸರಿಯಾಗಿ ಹಂಚಿಕೆಯಾಗಲಿಲ್ಲ. ಹಾಗಾಗಿ ನಾನು ಸೋಲಬೇಕಾಯಿತು’ ಎಂದು ವಿಧಾನ ಪರಿಷತ್ ಸದಸ್ಯ ಎಂ.ಟಿ.ಬಿ ನಾಗರಾಜ್ ಹೇಳಿದ್ದಾರೆ. 

ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಮತದಾರರಿಗೆ ಹಂಚಿಕೆಯಾಗಬೇಕಿದ್ದ ಹಣ ಅವರನ್ನು ತಲುಪಿಲ್ಲ ಎಂಬ ಕುರಿತು ನನಗೆ ಹಲವು ದೂರು ಬಂದಿದ್ದವು. ಈ ಲೋಕಸಭಾ ಚುನಾವಣೆಯಲ್ಲಿ ಹಾಗೇ ಆಗುವುದು ಬೇಡ’ ಎಂದರು.

ADVERTISEMENT

‘ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಹಲವು ಮುಖಂಡರ ಸ್ವಯಂಕೃತ ಅಪರಾಧವೂ ನನ್ನ ಸೋಲಿಗೆ ಕಾರಣ. ಸಮಯದ ಕೊರತೆಯಿಂದ ಪ್ರಚಾರ ಕೈಗೊಳ್ಳಲು ಸಾಧ್ಯವಾಗಲಿಲ್ಲ’ ಎಂದು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.