ADVERTISEMENT

ವೈದ್ಯಾಧಿಕಾರಿ ನಾ‍ಪತ್ತೆಗೂ ಎಂಟಿಬಿಗೂ ಸಂಬಂಧ ಇಲ್ಲ: ಶರತ್‌ ಬಚ್ಚೇಗೌಡ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2020, 20:32 IST
Last Updated 19 ಡಿಸೆಂಬರ್ 2020, 20:32 IST
ಹೊಸಕೋಟೆ ತಾಲೂಕು ವೈದ್ಯಾಧಿಕಾರಿ ಡಾ ಮಂಜುನಾಥ್ ಅವರನ್ನು ಶಾಸಕ ಶರತ್ ಬಚ್ಚೇಗೌಡ ಶನಿವಾರ ಅವರ ನಿವಾಸಕ್ಕೆ ಭೇಟಿ ಮಾಡಿ ಮಾತನಾಡಿದರು
ಹೊಸಕೋಟೆ ತಾಲೂಕು ವೈದ್ಯಾಧಿಕಾರಿ ಡಾ ಮಂಜುನಾಥ್ ಅವರನ್ನು ಶಾಸಕ ಶರತ್ ಬಚ್ಚೇಗೌಡ ಶನಿವಾರ ಅವರ ನಿವಾಸಕ್ಕೆ ಭೇಟಿ ಮಾಡಿ ಮಾತನಾಡಿದರು   

ಹೊಸಕೋಟೆ: ‘ವೈದ್ಯಾಧಿಕಾರಿ ಡಾ.ಮಂಜುನಾಥ್‌ ನಾಪತ್ತೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ಕೆಲವರು ನನ್ನ ಕೈವಾಡವಿದೆ. ಅಲ್ಲದೆ, ಜಾತಿ ರಾಜಕಾರಣ ಮಾಡುತ್ತಿರುವುದಾಗಿ ದೂರಿದ್ದಾರೆ. ಇದು ಸತ್ಯಕ್ಕೆ ದೂರವಾದದ್ದು’ ಎಂದು ಶಾಸಕ ಶರತ್‌ ಬಚ್ಚೇಗೌಡ ತಿಳಿಸಿದರು.

ವೈದ್ಯಾಧಿಕಾರಿ ಡಾ.ಮಂಜುನಾಥ್‌ ನಿವಾಸಕ್ಕೆ ಶನಿವಾರ ಭೇಟಿ ನೀಡಿ ಸಮಾಲೋಚನೆ ನಡೆಸಿದರು. ದಾಳಿ ನಂತರ ಅವರಿಗಾದ ಸಮಸ್ಯೆ ಬಗ್ಗೆ 20 ನಿಮಿಷ ಮೊಬೈಲ್‌ ಮೂಲಕ ಮಾತನಾಡಿ ಆತ್ಮಸ್ಥೈರ್ಯ ತುಂಬಿದ್ದು ನಿಜ‘ ಎಂದು ಹೇಳಿದರು.

ಈ ‍ಪ್ರಕರಣದಲ್ಲಿ ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗಾರಾಜ್‌ ಅವರ ಕೈವಾಡವೂ ಇಲ್ಲ. ಯಾರೋ ಒಬ್ಬರ ಸ್ವಾರ್ಥಕ್ಕಾಗಿ ಈ ಪ್ರಕರಣ ನಡೆದಿರುವ ಸಾಧ್ಯತೆ ಇದೆ. ವಿನಾಕಾರಣ ನನ್ನ ವಿರುದ್ಧ ಆರೋಪ ಮಾಡುವುದು ಸರಿಯಲ್ಲ ಎಂದರು.

ADVERTISEMENT

ಈ ಪ್ರಕರಣದಲ್ಲಿ ಸ್ಥಳೀಯ ಮುಖಂಡ ಜಯರಾಜ್ ಅವರನ್ನು ಈ ಬಗ್ಗೆ ಮೂರು ಬಾರಿ ವಿಚಾರಣೆಗೆ ಕರೆಯಲಾಗಿದ್ದು ತನಿಖೆ ಪ್ರಗತಿಯಲ್ಲಿದೆ ಡಿವೈಎಸ್‌ಪಿ ಉಮಾಶಂಕರ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.