ಮುಳಬಾಗಿಲು: ತಾಲ್ಲೂಕಿನ ಮಹಿಳಾ ಕಾಂಗ್ರೆಸ್ ವತಿಯಿಂದ ನಗರದ ಶಿವಕೇಶವ ನಗರದ ಉದ್ಭವ ಲಿಂಗೇಶ್ವರ ದೇವಾಲಯದ ಆವರಣದಲ್ಲಿ ಶನಿವಾರ ಮಹಿಳಾ ದಿನಾಚರಣೆ ನಡೆಯಿತು.
ಕಾರ್ಯಕ್ರಮದ ಪ್ರಯುಕ್ತ ಕಾಂಗ್ರೆಸ್ ಪಕ್ಷದ ಮಹಿಳಾ ಮುಖಂಡರು ದೇವಾಲಯದಲ್ಲಿ ಪೂಜೆಯನ್ನು ಸಲ್ಲಿಸಿ ನಂತರ ಅರಿಶಿನ–ಕುಂಕುಮ ಹಾಗೂ ಬಳೆಗಳನ್ನು ಮಹಿಳೆಯರಿಗೆ ವಿತರಿಸಿ ಕೇಕ್ ಕತ್ತರಿಸಿ ಎಲ್ಲರಿಗೂ ಸಿಹಿಯನ್ನು ಹಂಚಿ ಸಂಭ್ರಮಿಸಿದರು.
ಈ ವೇಳೆ ಮುಖಂಡರು ಮಾತನಾಡಿ, ಮಹಿಳೆಯರಿಗೆ ಎಲ್ಲಾ ರೀತಿಯ ಸ್ವಾತಂತ್ರ್ಯ ನೀಡಿದ ಕಾಂಗ್ರೆಸ್ ಪಕ್ಷ ಮಹಿಳೆಯರಿಗೆ ವಿಶೇಷ ಗೌರವಗಳನ್ನು ನೀಡುತ್ತಾ, ರಾಜ್ಯ ಸರ್ಕಾರ ಗ್ಯಾರಂಟಿಗಳ ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣ ಮಾಡುತ್ತಿದೆ. ಹೀಗಾಗಿ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಗಟ್ಟಿಯಾಗಿದೆ ಎಂದು ಹೇಳಿದರು.
ಅನುಸೂಯಮ್ಮ, ಸರಸ್ವತಮ್ಮ, ನಾಗೇಶ್ವರಿ, ಶಾರದಮ್ಮ, ರೂಪ, ವಿಜಯಶಾಂತಿ,ಕವಿತ, ಮಂಜುಳಾ, ಅಮರಮ್ಮ, ಈಶ್ವರಮ್ಮ, ಶಾರದಮ್ಮ, ರಾಧಮ್ಮ, ಸೆಲ್ವಿ, ಪ್ರೇಮಾ, ಜಯಮ್ಮ, ಗೌರಮ್ಮ, ಅನಿತ, ಶಶಿಕಲಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.