ADVERTISEMENT

ದೇವನಹಳ್ಳಿ: ರಸ್ತೆ ಗುಂಡಿ ಮುಚ್ಚಿಸಿದ ಪುರಸಭೆ ಅಧಿಕಾರಿಗಳು

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2024, 16:12 IST
Last Updated 20 ಡಿಸೆಂಬರ್ 2024, 16:12 IST
ವಿಜಯಪುರ ಪಟ್ಟಣದ ಕೋಲಾರ ಮುಖ್ಯರಸ್ತೆಯ ಶಿವಗಣೇಶ ಸರ್ಕಲ್‌ನಲ್ಲಿ ಗುಂಡಿಗೆ ಜಲ್ಲಿ ತುಂಬಿಸಿದರು
ವಿಜಯಪುರ ಪಟ್ಟಣದ ಕೋಲಾರ ಮುಖ್ಯರಸ್ತೆಯ ಶಿವಗಣೇಶ ಸರ್ಕಲ್‌ನಲ್ಲಿ ಗುಂಡಿಗೆ ಜಲ್ಲಿ ತುಂಬಿಸಿದರು   

ವಿಜಯಪುರ(ದೇವನಹಳ್ಳಿ): ಪಟ್ಟಣದ ಕೋಲಾರ ಮುಖ್ಯರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದರಿಂದ, ದ್ವಿಚಕ್ರ ವಾಹನ ಸವಾರರು ಪದೇ ಪದೇ ಬಿದ್ದು ಗಾಯಗೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ಪುರಸಭೆಯ ಅಧಿಕಾರಿಗಳು ಗುಂಡಿಗಳಿಗೆ ಜಲ್ಲಿ ತುಂಬಿಸಿದ್ದಾರೆ.

ಕೋಲಾರ ಮುಖ್ಯರಸ್ತೆಯ ಅಗಲೀಕರಣ ಕಾಮಗಾರಿ ನಡೆಯುತ್ತಿದೆಯಾದರೂ ಇನ್ನು ಪೂರ್ಣಗೊಂಡಿಲ್ಲ. ಶಿವಗಣೇಶ ಸರ್ಕಲ್ ಸೇರಿದಂತೆ ಹಲವು ಕಡೆಗಳಲ್ಲಿ ನಡು ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದರಿಂದ ದ್ವಿಚಕ್ರ ವಾಹನ ಸವಾರರಿಗೆ ಕಂಟಕವಾಗಿದ್ದವು. ರಾತ್ರಿ ವೇಳೆಯಲ್ಲಿ ಸಂಚರಿಸುವಾಗ ಹಲವು ಮಂದಿ ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಸಿಮೆಂಟ್ ಮಿಶ್ರಿತ ಜಲ್ಲಿಯನ್ನು ಗುಂಡಿಗಳಿಗೆ ತುಂಬಿಸಲಾಗಿದೆ.

ಇದು ಲೋಕೋಪಯೋಗಿ ಇಲಾಖೆಗೆ ಸೇರಿದ ರಸ್ತೆ. ಸಾರ್ವಜನಿಕರಿಗೆ ಆಗುತ್ತಿರುವ ಅಪಾಯವನ್ನು ಗಮನಿಸಿ ಜಲ್ಲಿ ತುಂಬಿಸಿದ್ದೇವೆ. ಸಂಬಂಧಪಟ್ಟ ಅಧಿಕಾರಿಗಳು ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ಮುಖ್ಯಾಧಿಕಾರಿ ಜಿ.ಆರ್.ಸಂತೋಷ್ ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.