ADVERTISEMENT

ಮುತ್ಸಂದ್ರ ಗ್ರಾ.ಪಂ: 17 ಸ್ಥಾನದಲ್ಲಿ ಬಿಜೆಪಿ ಬೆಂಬಲಿತರ ಗೆಲುವು

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2022, 5:59 IST
Last Updated 1 ನವೆಂಬರ್ 2022, 5:59 IST
ಹೊಸಕೋಟೆ ತಾಲೂಕಿನ ಮುತ್ಸಂದ್ರ ಗ್ರಾಮ ಪಂಚಾಯತಿಯಲ್ಲಿ ಜಯಭೇರಿ ಬಾರಿಸಿದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಬೆಳ್ಳಿಕೆರೆ ಮಂಜುನಾಥ್ ರಿಗೆ ಪ್ರಮಾಣ ಪತ್ರ ವಿತರಿಸಿದ ಚುನಾವಣಾಧಿಕಾರಿ ವಿವೇಕಾನಂದ.
ಹೊಸಕೋಟೆ ತಾಲೂಕಿನ ಮುತ್ಸಂದ್ರ ಗ್ರಾಮ ಪಂಚಾಯತಿಯಲ್ಲಿ ಜಯಭೇರಿ ಬಾರಿಸಿದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಬೆಳ್ಳಿಕೆರೆ ಮಂಜುನಾಥ್ ರಿಗೆ ಪ್ರಮಾಣ ಪತ್ರ ವಿತರಿಸಿದ ಚುನಾವಣಾಧಿಕಾರಿ ವಿವೇಕಾನಂದ.   

ಹೊಸಕೋಟೆ: ತಾಲ್ಲೂಕಿನ ಅನುಗೊಂಡನಹಳ್ಳಿ ಹೋಬಳಿ ಮುತ್ಸಂದ್ರ ಗ್ರಾಮ ಪಂಚಾಯಿತಿಯ 23 ಸ್ಥಾನಗಳಿಗೆ ನಡೆದ ಚುನಾವಣೆಯ ಪೈಕಿ 17 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ಜಯಭೇರಿ ಬಾರಿಸಿದ್ದಾರೆ.

ಪಟ್ಟಣದ ಸರ್ಕಾರಿ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ಮತ ಎಣಿಕೆ ನಡೆಯಿತು.

23 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 47 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 6 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ.

ADVERTISEMENT

ಬಿಜೆಪಿ ಮುಖಂಡರು ಸಂಭ್ರಮಾಚರಣೆ ಮಾಡಿದರು.

ಚುನಾವಣಾಧಿಕಾರಿ ವಿವೇಕಾನಂದ ಗೆದ್ದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಿದರು. ಗೆದ್ದ ಅಭ್ಯರ್ಥಿಗಳ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.