ADVERTISEMENT

ಘಾಟಿ ಕ್ಷೇತ್ರದಲ್ಲಿ ಪಂಚಮಿ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2024, 15:53 IST
Last Updated 9 ಆಗಸ್ಟ್ 2024, 15:53 IST
ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಕ್ಷೇತ್ರದಲ್ಲಿ ನಾಗರಪಂಚಮಿ ಅಂಗವಾಗಿ ಶುಕ್ರವಾರ  ನಾಗರಕಲ್ಲುಗಳಿಗೆ ಮಹಿಳೆಯರು ಪೂಜೆ ಸಲ್ಲಿಸಿದರು   
ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಕ್ಷೇತ್ರದಲ್ಲಿ ನಾಗರಪಂಚಮಿ ಅಂಗವಾಗಿ ಶುಕ್ರವಾರ  ನಾಗರಕಲ್ಲುಗಳಿಗೆ ಮಹಿಳೆಯರು ಪೂಜೆ ಸಲ್ಲಿಸಿದರು      

ದೊಡ್ಡಬಳ್ಳಾಪುರ: ನಾಗರಪಂಚಮಿ ದಿನವಾದ ಶುಕ್ರವಾರ ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭಕ್ತರು ಆಗಮಿಸಿ ನಾಗರಕಲ್ಲುಗಳಿಗೆ ಪೂಜೆ ಸಲ್ಲಿಸುತ್ತಿದರು.

ಸುಬ್ರಹ್ಮಣ್ಯಸ್ವಾಮಿಗೆ ವಿಶೇಷ ಹೂವಿನ ಅಂಲಕಾರ ಮಾಡಲಾಗಿತ್ತು. ದೇವಾಲಯವನ್ನು ತರಳಿ ತೋರಣಗಳಿಂದ ಸಿಗರಿಸಲಾಗಿತ್ತು. ಬೆಳಗಿನ ಜಾವ 5 ಗಂಟೆಯಿಂದಲೇ ಘಾಟಿ ಕ್ಷೇತ್ರದಲ್ಲಿ ನಾಗರಕಲ್ಲುಗಳ ಪೂಜೆ ಪ್ರಾರಂಭವಾಗಿದ್ದವು.

ಕರಾವಳಿ ಜಿಲ್ಲೆಯಲ್ಲಿ ಈ ಬಾರಿ ಮಳೆ ಹೆಚ್ಚಾಗಿ ಭೂಕುಸಿ‌ತದಿಂದ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಹಾಗಾಗಿ ನಾಗರಪಂಚಮಿಯಂದು ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗುವ ಭಕ್ತರು ಸಹ ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಮಿಸಿದ್ದರು. ಹಿಂದಿನ ವರ್ಷಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರ ಸಂಖ್ಯೆ ಕಂಡು ಬಂತು.

ADVERTISEMENT

ಮಧ್ಯಾಹ್ನ 12ಗೆ ದೇವಾಲಯದ ಪರಾಂಗಣದಲ್ಲಿ ಸುಬ್ರಹ್ಮಣ್ಯಸ್ವಾಮಿ ಉತ್ಸವ ನಡೆಯಿತು. ದೇವಾಲಯದ ಪ್ರಧಾನ ಅರ್ಚಕ ಆರ್.ಸುಬ್ರಮಣ್ಯ, ದೇವಾಲಯ ಆಡಳಿತ ಮಂಡಳಿ ಕಾರ್ಯನಿರ್ವಾಹಕ ಅಧಿಕಾರಿ ನಾರಾಯಣಸ್ವಾಮಿ ಇದ್ದರು.

 ಸುಬ್ರಹ್ಮಣ್ಯಸ್ವಾಮಿಗೆ ಹೂವಿನ ಅಲಂಕಾರ
ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಕ್ಷೇತ್ರದಲ್ಲಿ ನಾಗರಪಂಚಮಿ ಅಂಗವಾಗಿ ಶುಕ್ರವಾರ ದೇವಾಲಯದಲ್ಲಿ ಸುಬ್ರಹ್ಮಣ್ಯಸ್ವಾಮಿ ಉತ್ಸವ ನಡೆಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.