ADVERTISEMENT

ಹೆಸರಘಟ್ಟ: ಜನಮಾನಸ ಸಮಾವೇಶ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2025, 16:16 IST
Last Updated 14 ಫೆಬ್ರುವರಿ 2025, 16:16 IST
ಹೆಸರುಘಟ್ಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ಮಂಜುನಾಥ್ ಅದ್ದೆ ಮಾತನಾಡಿದರು. 
ಹೆಸರುಘಟ್ಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ಮಂಜುನಾಥ್ ಅದ್ದೆ ಮಾತನಾಡಿದರು.    

ಹೆಸರಘಟ್ಟ: ಹೆಸರಘಟ್ಟದಲ್ಲಿ ಫೆಬ್ರುವರಿ 16ರಂದು ನಡೆಯಲಿರುವ ಜನ ಮಾನಸ ಸಮಾವೇಶಕ್ಕೆ ಯಲಹಂಕ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು  ಸಮಾವೇಶವನ್ನು ಯಶಸ್ವಿಗೊಳಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ಮಂಜುನಾಥ್ ಅದ್ದೆ ಮನವಿ ಮಾಡಿದರು

ಯಲಹಂಕ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ  ಬಲಗೊಳಿಸುವ ನಿಟ್ಟಿನಲ್ಲಿ ಜನಮಾನಸ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸುಮಾರು ಮೂರು ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನೀರಿಕ್ಷೆ ಇದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಾಂಗ್ರೆಸ್ ಮುಖಂಡರಾದ ವೆಂಕಟೇಶ್, ವೆಂಕಟಾಚಲಪ್ಪ, ಬಸವರಾಜು, ಚಂದ್ರಶೇಖರ್, ಚೇತನ್, ಲಕ್ಷ್ಮೀನಾರಾಯಣ್, ರುದ್ರೇಶ್, ಶ್ರೀನಿವಾಸ್, ಬಾಬು, ಮನು, ಹನುಮಂತರಾಜು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.