ADVERTISEMENT

ಆನೇಕಲ್: ಮತದಾರರ ಜಾಗೃತಿ ಜಾಥಾ

​ಪ್ರಜಾವಾಣಿ ವಾರ್ತೆ
Published 26 ಜನವರಿ 2023, 5:09 IST
Last Updated 26 ಜನವರಿ 2023, 5:09 IST
ಆನೇಕಲ್‌ನಲ್ಲಿ ತಾಲ್ಲೂಕು ಸ್ವೀಪ್ ಸಮಿತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಜಾಗೃತಿ ಜಾಥಾ ನಡೆಯಿತು
ಆನೇಕಲ್‌ನಲ್ಲಿ ತಾಲ್ಲೂಕು ಸ್ವೀಪ್ ಸಮಿತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಜಾಗೃತಿ ಜಾಥಾ ನಡೆಯಿತು   

ಆನೇಕಲ್: ಪಟ್ಟಣದಲ್ಲಿ ತಾಲ್ಲೂಕು ಸ್ವೀಪ್‌ ಸಮಿತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ನಡೆಯಿತು.

ಜಾಥಾಗೆ ಚಾಲನೆ ನೀಡಿದ ತಹಶೀಲ್ದಾರ್‌ ಶಿವಪ್ಪ ಎಚ್‌. ಲಮಾಣಿ ಮಾತನಾಡಿ, ಮತದಾನ ಅತ್ಯಂತ ಪವಿತ್ರವಾದ ಕಾರ್ಯ. ಹಾಗಾಗಿ ಪ್ರತಿಯೊಬ್ಬರು ಮತದಾನ ಮಾಡಬೇಕು. ಅರ್ಹ ವಯೋಮಿತಿಯ ಪ್ರತಿಯೊಬ್ಬರು ಮತದಾರರ ಪಟ್ಟಿಗೆ ಹೆಸರು ನೋಂದಣಿ ಮಾಡಿಸಬೇಕು. ಈ ಬಗ್ಗೆ ಶಾಲಾ, ಕಾಲೇಜುಗಳಲ್ಲಿ ಎಲ್ಲಾ ಹಂತಗಳಲ್ಲಿಯೂ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಲಕ್ಷ್ಮೀನಾರಾಯಣಸ್ವಾಮಿ ಮಾತನಾಡಿ, ತಾಲ್ಲೂಕಿನ ಎಲ್ಲಾ ಶಾಲಾ, ಕಾಲೇಜುಗಳಲ್ಲಿ ಮತದಾರರ ಸಂಘಗಳನ್ನು ಸ್ಥಾಪಿಸಲಾಗಿದೆ. ಈ ಮೂಲಕ ವಿದ್ಯಾರ್ಥಿಗಳಲ್ಲಿ ಮತದಾನದ ಬಗ್ಗೆ ಮತ್ತು ಪ್ರಜಾಪ್ರಭುತ್ವದ ಬಗ್ಗೆ ಜಾಗೃತಿ ಮೂಡಿಸಲು ಬೀದಿ ನಾಟಕ, ಜಾಥಾ, ಪ್ರಬಂಧ ಸ್ಪರ್ಧೆ, ರಸಪ್ರಶ್ನೆ, ಯುವ ಸಂಸತ್‌ ಮತ್ತಿತರ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ADVERTISEMENT

ಮತದಾರರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ವಿದ್ಯಾರ್ಥಿಗಳಿಗೆ ಮತದಾರರ ದಿನಾಚರಣೆಯ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿ ಜಾಗೃತಿ ಮೂಡಿಸಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಜೆ.ಎಂ. ಜಯಲಕ್ಷ್ಮೀ, ಸಿಡಿಪಿಒ ಕವಿತಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.