ADVERTISEMENT

ದೇವನಹಳ್ಳಿ| ಬಲಿಷ್ಠ ಪ್ರಜಾಪ್ರಭುತ್ವ: ಯುವ ಮತದಾರರ ಪಾತ್ರ ನಿರ್ಣಾಯಕ

​ಪ್ರಜಾವಾಣಿ ವಾರ್ತೆ
Published 26 ಜನವರಿ 2026, 2:55 IST
Last Updated 26 ಜನವರಿ 2026, 2:55 IST
ದೇವನಹಳ್ಳಿಯ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶ ವೆಂಕಟೇಶ್ ಎನ್. ಮಾತನಾಡಿದರು.
ದೇವನಹಳ್ಳಿಯ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶ ವೆಂಕಟೇಶ್ ಎನ್. ಮಾತನಾಡಿದರು.   

ದೇವನಹಳ್ಳಿ: ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಭಾನುವಾರ  16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಆಯೋಜಿಸಲಾಯಿತು.

ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಹಾಗೂ ಮೈ ಭಾರತ್ ಇಲಾಖೆಯ ಸಹಯೋಗದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. 

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಿ.ಎಸ್. ಶ್ರೀನಾಥಗೌಡ ಮಾತನಾಡಿ, ಸಂವಿಧಾನದ 324ನೇ ವಿಧಿಯನ್ವಯ ಸ್ಥಾಪಿತವಾದ ರಾಷ್ಟ್ರೀಯ ಚುನಾವಣಾ ಆಯೋಗದ ಅಂಗವಾಗಿ ಪ್ರತಿ ವರ್ಷ ಜನವರಿ 25ರಂದು ರಾಷ್ಟ್ರೀಯ ಮತದಾರರ ದಿನ ಆಚರಿಸಲಾಗುತ್ತಿದೆ. ಮತದಾನದ ಮಹತ್ವ, ಯುವ ಮತದಾರರ ಹಕ್ಕುಗಳು ಹಾಗೂ ಚುನಾವಣಾ ಪ್ರಕ್ರಿಯೆಯ ಕುರಿತು ಜಾಗೃತಿ ಮೂಡಿಸುವುದು ಈ ದಿನದ ಉದ್ದೇಶವಾಗಿದೆ ಎಂದು ಹೇಳಿದರು.

ADVERTISEMENT

ಯೋಜನಾ ನಿರ್ದೇಶಕ ರಮೇಶ್ ಮಾತನಾಡಿ, ಬಲಿಷ್ಠ ಪ್ರಜಾಪ್ರಭುತ್ವ ನಿರ್ಮಾಣದಲ್ಲಿ ಯುವ ಮತದಾರರ ಪಾತ್ರ ನಿರ್ಣಾಯಕವಾಗಿದ್ದು, ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೆ ವಿವೇಚನೆಯ ಮತದಾನ ಮಾಡಬೇಕು ಎಂದು ಹೇಳಿದರು.

ತಹಶೀಲ್ದಾರ್ ಅನಿಲ್ ಕುಮಾರ್ ಮಾತನಾಡಿ, ಅರ್ಹ ಯುವ ಮತದಾರರು ಮತದಾರರಾಗಿ ನೋಂದಣಿ ಮಾಡಿಕೊಳ್ಳಲು ವಿಶೇಷ ಅಭಿಯಾನಗಳೊಂದಿಗೆ ಆನ್‌ಲೈನ್ ನೋಂದಣಿಗೂ ಅವಕಾಶ ಕಲ್ಪಿಸಲಾಗಿದೆ ಎಂದರು.

ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಮತದಾರರೇ ಪ್ರಭುಗಳು ಎಂದು ದೇವನಹಳ್ಳಿ ತಾಲ್ಲೂಕು ಪ್ರಧಾನ ಸಿವಿಲ್ ನ್ಯಾಯಾಧೀಶ ವೆಂಕಟೇಶ್ ಎನ್. ಅಭಿಪ್ರಾಯಪಟ್ಟರು. ಯುವ ಮತದಾರರಿಗೆ ಗುರುತಿನ ಚೀಟಿ ವಿತರಿಸಲಾಯಿತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.