ADVERTISEMENT

ನವೋದಯ ವಿದ್ಯಾರ್ಥಿಗಳ ಸಮಾವೇಶ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2020, 5:45 IST
Last Updated 10 ಡಿಸೆಂಬರ್ 2020, 5:45 IST
ನವೋದಯ ವಿದ್ಯಾಲಯದ ಹಳೆಯ ವಿದ್ಯಾರ್ಥಿಗಳ ಸಮಾವೇಶ ನಡೆಯಿತು
ನವೋದಯ ವಿದ್ಯಾಲಯದ ಹಳೆಯ ವಿದ್ಯಾರ್ಥಿಗಳ ಸಮಾವೇಶ ನಡೆಯಿತು   

ದೊಡ್ಡಬಳ್ಳಾಪುರ: ಜವಾಹರ್ ನವೋದಯ ವಿದ್ಯಾಲಯದಲ್ಲಿ 1995-2002ನೇ ಸಾಲಿನ ವಿದ್ಯಾರ್ಥಿಗಳಿಂದ ಪ್ರತಿ ವರ್ಷದಂತೆ ಈ ಬಾರಿಯೂ ಜವಾಹರ್ ನವೋದಯ ವಿದ್ಯಾಲಯದ ಹಳೆ ವಿದ್ಯಾರ್ಥಿಗಳ ಸಮಾವೇಶ ದಶೋಲ್ಲಾಸ ನಡೆಯಿತು.

ವಿದ್ಯಾಲಯದ ಸಭಾಂಗಣದಲ್ಲಿ 10ನೇ ಸಾಲಿನ ವಿದ್ಯಾರ್ಥಿಗಳ ವತಿಯಿಂದ ಆಯೋಜಿದ್ದ ಸಮಾರಂಭವನ್ನು ಆನ್‌ಲೈನ್‌ ಮೂಲಕ ಪ್ರಸಾರ ಮಾಡಿದ್ದು ವಿಶೇಷವಾಗಿತ್ತು. ಗೂಗಲ್ ಮೀಟ್‌ ಮೂಲಕ ಕಾರ್ಯಕ್ರಮ ವೀಕ್ಷಿಸಿ ಅಭಿಪ್ರಾಯ ಹಂಚಿಕೊಂಡರು.

ವಿದ್ಯಾಲಯದ ಪ್ರಾಂಶುಪಾಲ ಆರ್. ಚಕ್ರವರ್ತಿ ಮಾತನಾಡಿ, ವಿದ್ಯಾಲಯದ ಸರ್ವತೋಮುಖ ಅಭಿವೃದ್ಧಿಯ ಜತೆಗೆ ಸಾಮಾಜಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಂಡಿರುವುದು ಅಭಿನಂದನೀಯ ಎಂದರು.

ADVERTISEMENT

ಎಂಜಿನಿಯರ್ ಆಗಿರುವ ಸಿ.ಎಸ್. ಶಶಿಕಿರಣ್ ತಮ್ಮ ವಿದ್ಯಾಭ್ಯಾಸದ ಹಳೆ ನೆನಪುಗಳನ್ನು ಬಿಚ್ಚಿಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.