ADVERTISEMENT

ವಿದ್ಯಾರ್ಥಿಗಳ ಪಾಸ್ ನಿರ್ಲಕ್ಷ್ಯ: ಬಸ್ ತಡೆದು ಆಕ್ರೋಶ 

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2019, 13:03 IST
Last Updated 7 ಮಾರ್ಚ್ 2019, 13:03 IST
ಬಸ್ ತಡೆದು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಮತ್ತು ಪೋಷಕರು
ಬಸ್ ತಡೆದು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಮತ್ತು ಪೋಷಕರು   

ದೇವನಹಳ್ಳಿ: ಪಾಸ್ ಇರುವ ವಿದ್ಯಾರ್ಥಿಗಳನ್ನು ಬಸ್‌ಗೆ ಹತ್ತಿಸದೆ ನಿರ್ವಾಹಕರು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳು ಮತ್ತು ಪೊಷಕರು ಹಳೆ ಬಸ್ ನಿಲ್ದಾಣದಲ್ಲಿ ಬಸ್ ತಡೆದು ನಿರ್ವಾಹಕರನ್ನು ತರಾಟೆಗೆ ತೆಗೆದುಕೊಂಡರು.

ಪೋಷಕ ರಾಜಣ್ಣ ಮಾತನಾಡಿ, ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳಿಗೆ ತೊಂದರೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸುತ್ತಿಲ್ಲ ಎಂಬುದನ್ನು ಸಾರಿಗೆ ಇಲಾಖೆ ಮತ್ತು ಬಸ್ ನಿರ್ವಾಹಕರು ಅರ್ಥ ಮಾಡಿಕೊಳ್ಳಬೇಕು ಎಂದು ಹರಿಹಾಯ್ದರು.

ಪೋಷಕ ಕೃಷ್ಣಪ್ಪ ಮಾತನಾಡಿ, ಈ ಸಮಸ್ಯೆ ಒಂದು ದಿನದ ಕತೆಯಲ್ಲ. ಪ್ರತಿದಿನ ಬೆಳಿಗ್ಗೆ 7.30ರಿಂದ 10.30ರವರೆಗೆ ನಿರಂತರ. ನಿರ್ವಾಹಕರು ವಿದ್ಯಾರ್ಥಿಗಳನ್ನು ನಿಂದಿಸುವುದು, ತಳ್ಳುವುದು ಮಾಡುತ್ತಾರೆ. ಹೆಣ್ಣು ಮಕ್ಕಳಿಗೆ ತೊಂದರೆ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ಮಧ್ಯಸ್ಥಿಕೆ ವಹಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.