ADVERTISEMENT

ದೇವನಹಳ್ಳಿ | ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 15 ಜುಲೈ 2025, 2:17 IST
Last Updated 15 ಜುಲೈ 2025, 2:17 IST

ದೇವನಹಳ್ಳಿ: ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಪ್ರಸಕ್ತ ಸಾಲಿಗೆ ನೇಕಾರ ಸಮ್ಮಾನ್ ಯೋಜನೆಯಡಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ವಾರ್ಷಿಕ ₹5ಸಾವಿರ ಆರ್ಥಿಕ ನೆರವು ನೀಡಲಾಗುತ್ತಿದ್ದು ಅರ್ಹ ನೇಕಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಜುಲೈ 25ರ ಒಳಗೆ ದೊಡ್ಡಬಳ್ಳಾಪುರದ ಕೆಐಎಡಿಬಿ ಅಪೇರಲ್ ಪಾರ್ಕ್‌ನಲ್ಲಿರುವ ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡದ ಉಪ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಎಂದು ಕೈಮಗ್ಗ ಮತ್ತು ಜವಳಿ ಉಪ ನಿರ್ದೇಶಕರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT