ADVERTISEMENT

ಗ್ರಾ.ಪಂ. ಸದಸ್ಯನ ಮೇಲೆ ಗುಂಡಿನ ದಾಳಿ: ನಾಲ್ವರ ಬಂಧನ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2025, 18:33 IST
Last Updated 6 ನವೆಂಬರ್ 2025, 18:33 IST
ಮುಬಾರಕ್‌
ಮುಬಾರಕ್‌   

ನೆಲಮಂಗಲ: ತಾಲ್ಲೂಕಿನ ಕಣೇಗೌಡನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಸಲೀಂ ಪಾಷಾ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ನೆಲಮಂಗಲ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಮುಬಾರಕ್‌(36), ಸಾದಿಕ್‌(29), ಆಸೀಫ್‌ಖಾನ್‌(34) ಹಾಗೂ ನಗೀನಾ ಬಂಧಿತರು.

ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸಲೀಂ ಪಾಷಾ ಸ್ಪರ್ಧೆಯನ್ನು ತಡೆಯಲು ಕೊಲೆ ಸಂಚು ರೂಪಿಸಲಾಗಿತ್ತು ಎನ್ನುವುದು ಪೊಲೀಸ್‌ ತನಿಖೆ ವೇಳೆ ಬಯಲಾಗಿದೆ.

ADVERTISEMENT

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ತಲೆಮರೆಸಿಕೊಂಡಿರುವ ಇತರ ಆರೋಪಿಗಳ ಪತ್ತೆಗೆ ಶೋಧ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದರು. 

ಸಲೀಂ ಪಾಷಾ ಅವರನ್ನು ಮನೆಯ ಬಳಿ ಮಾತನಾಡಿಸುವ ನೆಪದಲ್ಲಿ ಅಪರಿಚಿತರು ಗುಂಡು ಹಾರಿಸಿ ಪರಾರಿಯಾಗಿದ್ದರು. ಸಲೀಂ ಅವರ ಕೈಗೆ ಗುಂಡು ತಗುಲಿತ್ತು. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಾದಿಕ್‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.